Follow Us On

WhatsApp Group
Important
Trending

ಟಿಪ್ಪರ್ ಗೆ ಗುದ್ದಿದ ಕಾರು: ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಕಾರವಾರ: ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಚೆಂಡಿಯಾ ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟಿಪ್ಪರ್ ಚಾಲಕ ವಾಹನವನ್ನು ಹೆದ್ದಾರಿಯಿಂದ ಬಲಕ್ಕೆ ಯುಟರ್ನ್ ತೆಗೆದುಕೊಳ್ಳುತ್ತಿದ್ದ. ಈ ವೇಳೆ ಅಂಕೋಲಾ ಕಡೆಯಿಂದ ಕಾರವಾರ ಕಡೆಗೆ ಸಾಗುತ್ತಿದ್ದ ಕಾರು, ಟಿಪ್ಪರ್ ಗೆ ಗುದ್ದಿದೆ.

ಕಾರಿನ ಮುಂಭಾಗ ಜಖಂಗೊoಡಿದ್ದು, ಕಾರಿನಲ್ಲಿ ಇದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

Back to top button