Follow Us On

WhatsApp Group
Focus NewsImportant
Trending

ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಟ: ಇಬ್ಬರ ಬಂಧನ

ಕಾರವಾರ: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋವಾ ಮದ್ಯವನ್ನು ನಗರದ ಬಿಲ್ಟ್ ಸರ್ಕಲ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಗೋವಾದಿಂದ ಅಂಕೋಲಾ ಕಡೆ ತೆರಳುತ್ತಿದ್ದ ಕಾರಿನಲ್ಲಿ ಆರೋಪಿಗಳು ತೆರಳುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಮಾಜಾಳಿಯ ಗೋಟ್ನೇಭಾಗದ ಜ್ಞಾನೇಶ್ವರ ಕಿಂದಳಕರ್, ಚೆಂಡಿಯಾ ಗಾಂವಕರ್ ವಾಡಾದ ಪ್ರವೀಣ ದೇಸಾಯಿ ಬಂಧಿತರು ಎಂದು ತಿಳಿದುಬಂದಿದೆ.

ಮಾಜಾಳಿ ಚೆಕ್ಪೋಸ್ಟ್ ಮೂಲಕ ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದಾಗ ಬಿಲ್ಟ್ ಸರ್ಕಲ್ ಬಳಿ ತಡೆದು ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ವೇಳೆ 21 ಸಾವಿರ ಮೌಲ್ಯದ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯ ಪತ್ತೆಯಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

Back to top button