
ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಅಲ್ಲದೆ, ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ (ವಿದ್ಯಾರ್ಥಿಗಳ ) ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
- ಹೆಂಡತಿಗೆ ಊಟ ತಯಾರಿ ಮಾಡಲು ಹೇಳಿ ಕುಳಿತಲ್ಲಿಯೇ ಮೃತಪಟ್ಟ ಪಶು ಚಿಕಿತ್ಸಾಲಯದ ನೌಕರ
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ

ಮಂಗಳವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಮಳೆ ಇದೇ ಪ್ರಮಾಣದಲ್ಲಿ ಮುಂದುವರಿದರೆ, ರಜೆಯನ್ನು ವಿಸ್ತರಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ವಿಸ್ಮಯ ನ್ಯೂಸ್, ಕಾರವಾರ
