ರೆಡ್ ಅಲರ್ಟ್ ಘೋಷಣೆ ಹಿನ್ನಲೆ: ಶನಿವಾರವೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಯಾವ ಯಾವ ತಾಲೂಕಿನಲ್ಲಿ ರಜೆ ನೀಡಲಾಗಿದೆ ನೋಡಿ?

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸೂಚನೆ (ರೆಡ್ ಅಲರ್ಟ್) ಕಾರಣದಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಠಿಯಿಂದ ದಿನಾಂಕ:9-7-2022 ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ ಹಾಗೂ ಜೊಯಿಡಾ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳು, ಅಂಗನವಾಡಿ ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
- ಹೆಂಡತಿಗೆ ಊಟ ತಯಾರಿ ಮಾಡಲು ಹೇಳಿ ಕುಳಿತಲ್ಲಿಯೇ ಮೃತಪಟ್ಟ ಪಶು ಚಿಕಿತ್ಸಾಲಯದ ನೌಕರ
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ

ಭಾರಿ ಮಳೆಯಾಗುವ ಸೂಚನೆ (ರೆಡ್ ಅಲರ್ಟ್ ನ್ನು ಉಲ್ಲೇಖ (1) ರನ್ವಯ ನೀಡಿರುತ್ತದೆ. ಜಿಲ್ಲೆಯ ಕರಾವಳಿ ಭಾಗದಲ್ಲಿ ಹಾಗೂ ಶಿರಸಿ, ಸಿದ್ದಾಪುರ ಮತ್ತು ಜೋಯಿಡಾ ತಾಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್) ರಡಿ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರವರಿಗೆ ಪ್ರದತ್ತವಾದ ಅಧಿಕಾರದ ಮೇರೆಗೆ ಸದ್ರಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜು, ಅಂಗನವಾಡಿ ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ದಿನಾಂಕ: 09-07-2022 ರಂದು ರಜೆ ಘೋಷಿಸುವ ಕುರಿತು ಈ ಕೆಳಗಿನಂತೆ ಆದೇಶ ಮಾಡಿದೆ.
