Focus News
Trending

ನಾಮಧಾರಿ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಗೌರವ ಸಮರ್ಪಣೆ ಕಾರ್ಯಕ್ರಮ

ಕುಮಟಾ: ಗ್ಲೋಬಲ್ ನಾಮಧಾರಿ ಸಂಘ ಮತ್ತು ಸಮುದಾಯ ಸಂಘಗಳ ಸಹಕಾರದಲ್ಲಿ ಕುಮಟಾ ಪಟ್ಟಣದ ನಾಮಧಾರಿ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಗೌರವ ಸಮರ್ಪಣೆ ಕಾರ್ಯಕ್ರಮ ವಿಜೃಂಭಣೆಯಿoದ ನಡೆಯಿತು. ಪಟ್ಟಣದ ನಾಮಧಾರಿ ಸಭಾ ಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಡಿಡಿಪಿಐ ಈಶ್ವರ ನಾಯ್ಕ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಮೂಲಕ ಇನ್ನಷ್ಟು ಸಾಧನೆಗೆ ಪ್ರೇರಣೆ ನೀಡುವ ಕಾರ್ಯ ಗ್ಲೋಬಲ್ ನಾಮಧಾರಿ ಸಂಘ ಮಾಡಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರತ್ನಾಕರ ನಾಯ್ಕ ಮಾತನಾಡಿ, ನಾಮಧಾರಿ ಸಂಘದಿoದ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಕ್ಕೇರಿದಾಗ ನಿಮ್ಮಿಂದಲ್ಲೂ ಇತರೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರ ನೀಡುವ ಕಾರ್ಯವಾಗಬೇಕು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕಾರ್ಯ ಕೂಡ ಸಂಘದಿoದಾಗಬೇಕು ಎಂದರು.

ಜಿಲ್ಲಾ ನಾಮಧಾರಿ ಸಂಘದ ಅಧ್ಯಕ್ಷ ಮಂಜುನಾಥ ಎಲ್ ನಾಯ್ಕ ಮಾತನಾಡಿ, ಶಿಕ್ಷಣದಲ್ಲಿ ಸಾಧನೆ ಮಾಡಿದ ವ್ಯಕ್ತಿ ಉನ್ನತ ಸ್ಥಾನ ಪಡೆಯಲು ಸಾಧ್ಯ. ಹಾಗಾಗಿ ನಮ್ಮ ಸಮಾಜದ ಮಕ್ಕಳು ಉನ್ನತ ವ್ಯಾಸಂಗ ಮಾಡುವ ಮೂಲಕ ಶೈಕ್ಷಣಿಕ ಸಾಧನೆ ಮಾಡಬೇಕು. ಸಾಧನೆ ಪಥದಲ್ಲಿರುವ ಪ್ರತಿಭಾವಂತ ವಿದ್ಯಾರ್ಥಿಗಳ ಕನಸು ನನಸಾಗಲಿ ಎಂದು ಹಾರೈಸಿದರು.

ಜೆಡಿಎಸ್ ಮುಖಂಡ ಸೂರಜ ನಾಯ್ಕ ಸೋನಿ ಮಾತನಾಡಿ, ನಮ್ಮ ಸಂಘ ಮತ್ತು ಸಮಾಜದ ಒಂದು ನಿರೀಕ್ಷೆ ಇದೆ. ನಮ್ಮ ಮಕ್ಕಳು ಈ ಜಿಲ್ಲೆಯ ಆಡಳಿತದ ಚುಕ್ಕಾಣಿ ಹಿಡಿಯಬೇಕು. ಡಿಸಿ, ಎಸಿ, ಜಿಪಂ ಸಿಇಒ ಹೀಗೆ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಬೇಕು. ಆ ನಿಟ್ಟಿನಲ್ಲಿ ನಮ್ಮೆಲ್ಲ ಪ್ರತಿಭಾವಂತ ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಅಧೀನ ಕಾರ್ಯದರ್ಶಿ ವಸಂತ ಎನ್ ನಾಯ್ಕ ವಹಿಸಿದ್ದರು.

ಈ ಸಂದರ್ಭದಲ್ಲಿ ಸ್ವಾತಂತ್ರ ಹೋರಾಟಗಾರರ ಕುಟುಂಬದ ಶಂಕರ ಎನ್ ನಾಯ್ಕ ಮತ್ತು ಸಾಮಾಜಿಕ ಕಾರ್ಯಕರ್ತ ಡಾ. ಅಶೋಕ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಅಲ್ಲದೇ ಈ ಕಾರ್ಯಕ್ರಮದಲ್ಲಿ ಸತ್ಯ ನಾರಾಯಣ ಪೂಜೆ ನೆರವೇರಿಸಿದ ಜ್ಞಾನ ವಿಕಾಸ ಮಂದಿರದ ಸಂಸ್ಥಾಪಕ ಎನ್ ಬಿ ನಾಯ್ಕ ಅವರನ್ನು ಗೌರವಿಸಲಾಯಿತು. ಅಲ್ಲದೇ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 600ಕ್ಕೂ ಅಧಿಕ ಅಂಕ ಪಡೆದ ಮತ್ತು ಪಿಯುಸಿ ಪರೀಕ್ಷೆಯಲ್ಲಿ 575ಕ್ಕಿಂತ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ವಕೀಲ ಆರ್ ಜಿ ನಾಯ್ಕ, ಕುಮಟಾ ನಾಮಧಾರಿ ಸಂಘದ ಅಧ್ಯಕ್ಷ ಮಂಜುನಾಥ ನಾಯ್ಕ ಕೋಡ್ಕಣಿ, ಕಾರ್ಯದರ್ಶಿ ರಾಘವೇಂದ್ರ ನಾಯ್ಕ, ಹುಬ್ಬಳ್ಳಿ-ಧಾರವಾಡ ನಾಮಧಾರಿ ಸಂಘದ ಅಧ್ಯಕ್ಷ ಟಿ ಡಿ ನಾಯ್ಕ, ಸುಬ್ರಾಯ ನಾಯ್ಕ ಸಾರದಾಹೊಳೆ, ದಾಂಡೇಲಿ ಅಧ್ಯಕ್ಷ ಜಿ ಪಿ ನಾಯ್ಕ, ಕುಮಟಾದ ಯುವ ನಾಮಧಾರಿ ಅಧ್ಯಕ್ಷ ವಿನಾಯಕ ನಾಯ್ಕ, ನೌಕರರ ಸಂಘದ ಅಧ್ಯಕ್ಷ ಎನ್ ಆರ್ ನಾಯ್ಕ, ಮಹಿಳಾ ಸಂಘದ ಅಧ್ಯಕ್ಷೆ ಭಾರತಿ ನಾಯ್ಕ ಇತರರು ವೇದಿಕೆಯಲ್ಲಿದ್ದರು. ಕಾರ್ಯಕ್ರಮದಲ್ಲಿ ಗ್ಲೋಬಲ್ ನಾಮಧಾರಿ ಸಂಘದ ಕಾರ್ಯದರ್ಶಿ ಆರ್ ಐ ನಾಯ್ಕ ಸ್ವಾಗತಿಸಿದರು. ಶಿಕ್ಷಕ ಮಂಜುನಾಥ ನಾಯ್ಕ ನಿರೂಪಿಸಿ, ವಂದಿಸಿದರು.

Back to top button