Important
Trending

ಅರ್ಹ ಫಲಾನುಭವಿಗಳು ಕೋವಿಡ್‌ಗೆ ಬೂಸ್ಟರ್ ಡೋಸ್ ಪಡೆದುಕೊಳ್ಳಿ: ಜಿಲ್ಲಾಧಿಕಾರಿಗಳ ಮನವಿ

ಕಾರವಾರ: ಕೋವಿಡ್ ಸಾಂಕ್ರಾಮಿಕ ಕಾಯಿಲೆ ಇನ್ನೂ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಕೋವಿಡ್ ನಿಂದ ಆಗಬಹುದಾದ ತೊಂದರೆಗಳಿoದ ರಕ್ಷಿಸಿಕೊಳ್ಳಲು ಸಾರ್ವಜನಿಕರು ಲಸಿಕೆ ಪಡೆಯಲು ನಿರಾಸಕ್ತಿ ತೋರಬಾರದರು. 2ನೇ ಡೋಸ್ ಕೋವಿಡ್ ಲಸಿಕೆ ಪಡೆದು 6 ತಿಂಗಳ ಅವಧಿ ಪೂರೈಸಿರುವ ಎಲ್ಲಾ 18 ವರ್ಷ ಮೇಲ್ಪಟ್ಟ ನಾಗರಿಕರು ಬೂಸ್ಟರ್ ಡೋಸ್ ಲಸಿಕೆ ಕಡ್ಡಾಯವಾಗಿ ಕೂಡಲೇ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

DTH ಸರಿಪಡಿಸುತ್ತಿರುವ ವೇಳೆ ಅವಾಂತರ: ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ಕೋವಿಡ್ ಸಾಂಕ್ರಾಮಿಕ ರೋಗಕ್ಕೆ 2ನೇ ಡೋಸ್ ಲಸಿಕೆ ಪಡೆದು 6 ತಿಂಗಳ ನಂತರ ಲಸಿಕೆಯಿಂದ ಸಿಗುವ ರಕ್ಷಣೆ ಕಡಿಮೆಯಾಗುವ ಸಾದ್ಯತೆ ಇದೆ. ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾರ್ಗಸೂಚಿಯಂತೆ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆದುಕೊಳ್ಳಬೇಕೆಂದು ಸಾರ್ವಜನಿಕರಿಗೆ ಅವರು ಮನವಿ ಮಾಡಿದರು. ಈ ಬಗ್ಗೆ ಹೇಳಿಕೆ ನೀಡಿರುವ ಅವರು ಕೋವಿಡ್ ಸಾಂಕ್ರಾಮಿಕದಿoದ ರಕ್ಷಣೆ ಪಡೆಯಲು ಈಗಾಗಲೇ ದೇಶಾದ್ಯಂತ 12 ವರ್ಷ ಮೇಲ್ಪಟ್ಟ ಎಲ್ಲಾ ಫಲಾನುಭವಿಗಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲೂ ಹೆಚ್ಚಿನ ಫಲಾನುಭವಿಗಳು ಎರಡೂ ಡೋಸ್ ಲಸಿಕೆಯನ್ನು ಪಡೆದಿದ್ದಾರೆ. ಕೋವಿಡ್ ಲಸಿಕೆಯನ್ನು ಪಡೆದವರಲ್ಲಿ ಕೋವಿಡ್ ಖಾಯಿಲೆಯ ತೀವ್ರತೆ ಅತೀ ಕಡಿಮೆ ಪ್ರಮಾಣದಲ್ಲಿ ಇರುವುದು ಈಗಾಗಲೇ ಸಾಬೀತಾಗಿದೆ ಎಂದರು,

ಆಜಾದಿ ಕಿ ಅಮೃತ ಮಹೋತ್ಸವದ ಅಂಗವಾಗಿ 18 ವರ್ಷದಿಂದ 59 ವರ್ಷದವರೆಗಿನ ಎಲ್ಲಾ ನಾಗರಿಕರಿಗೆ ಜುಲೈ 15 ರಿಂದ ಸಪ್ಟೆಂಬರ್ 30ರ ವರೆಗೆ ಉಚಿತವಾಗಿ ನೀಡುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದುವರೆಗೆ ಶೇಕಡಾ 9 ರಷ್ಟು ಫಲಾನುಭವಿಗಳು ಮಾತ್ರ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆದಿರುತ್ತಾರೆ. ಹೆಚ್ಚಿನ ಸಂಖ್ಯೆಯಲ್ಲಿ ಬೂಸ್ಟರ್ ಡೋಸ್ ಪಡೆಯಬೇಕಿದೆ ಎಂದು ಮಾಹಿತಿ ನೀಡಿದರು.


ವಿಸ್ಮಯ ನ್ಯೂಸ್, ಕಾರವಾರ

Back to top button