ಶಿರಸಿ: ಕರೊನಾ ಸೋಂಕು ಎಲ್ಲೆಡೆ ಹೆಚ್ಚುತ್ತಿದೆ. ಹೀಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ ಕಡ್ಡಾಯಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಶಿರಸಿ ನಗರದಲ್ಲಿ ಕಾರ್ಯಾಚರಣೆ ನಡೆಸಿದ ಶಿರಸಿ ನಗರ ಮತ್ತು ಮಾರುಕಟ್ಟೆ ಠಾಣೆಯ ಪೊಲೀಸರು ಮಾರುಕಟ್ಟೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ ಧರಿಸದೆ ಬಂದ ಸಾರ್ವಜನಿಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ. 40 ಜನರ ಮೇಲೆ ಪ್ರಕರಣಗಳನ್ನು ದಾಖಲಿಸಿ 4000/-ರೂ ದಂಡ ವಿಧಿಸಿದ್ದಾರೆ.
ಕರೊನಾ ಹರಡದಂತೆ ತಡೆಗಟ್ಟಲು ಸಾರ್ವಜನಿಕರು ಮತ್ತು ವ್ಯಾಪಾರಿಗಳು ಕಡ್ಡಾಯವಾಗಿ ಮಾಸ್ಕ ಧರಿಸಬೇಕು. ನಿಯಮ ಉಲ್ಲಂಘಿಸಿ ನಿರ್ಲಕ್ಷತೆ ವಹಿಸಿದಲ್ಲಿ ಅಂತವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಶಿರಸಿ ಪೊಲೀಸರು ಎಚ್ಚರಿಸಿದ್ದಾರೆ.
[sliders_pack id=”1487″]