Big NewsImportant
Trending

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಸ್ತಾಪನೆ ಆರ್ಥಿಕ ಇಲಾಖೆಯಿಂದ ತಿರಸ್ಕಾರ? ಆಕ್ರೋಶ ಹೊರಹಾಕುತ್ತಿರುವ ಉತ್ತರಕನ್ನಡದ ಜನರು

ಉತ್ತರಕನ್ನಡ: ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಯಾವ ಕಾಲಮಿತಿಯಲ್ಲಿ ಮಂಜೂರು ಮಾಡಲಾಗುವುದು ಎಂದು ವಿಧಾನಸಭಾ ಅಧಿವೇಶನದಲ್ಲಿ ಶಾಸಕಿ ರೂಪಾಲಿ ನಾಯ್ಕ ಅವರು ಪ್ರಶ್ನೆ ಕೇಳಿದ್ದು, ಇದಕ್ಕೆ ಬಂದ ಉತ್ತರ ಮತ್ತೆ ಉತ್ತರಕನ್ನಡದ ಜನರನ್ನು ಕೆರಳುವಂತೆ ಮಾಡಿದೆ. ಈ ಕುರಿತು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ವಿಸ್ಮಯ ಟಿ.ವಿ: ವಿದ್ಯುತ್ ತಂತಿ ತಗುಲಿ ಯುವಕ ಸ್ಥಳದಲ್ಲೇ ಸಾವು: ತೋಟದ ಕೆಲಸಕ್ಕೆಂದು ಹೋದಾಗ ಅವಘಡ

ಕಾರವಾರದಲ್ಲಿ ಹೊಸದಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವ ಬಗ್ಗೆ ಈ ಹಿಂದೆ ಸ್ವೀಕರಿಸಲಾದ ಪ್ರಸ್ತಾವನೆಗೆ ಸಂಬoಧಿಸಿದoತೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೌಲಭ್ಯಕ್ಕಾಗಿ ಅಗತ್ಯವಿರುವ ಜಾಗ, ಸಿಬ್ಬಂದಿ, ಉಪಕರಣ ಹಾಗೂ ಇತ್ಯಾದಿ ಮೂಲ ಸೌಲಭ್ಯಗಳು ಹಾಗೂ ಅದಕ್ಕೆ ತಗಲುವ ಆರ್ಥಿಕ ಹೊರೆಯ ವಿವರಗಳನ್ನು ನಿರ್ದೇಶಕರು, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕಾರವಾರ ಇವರಿಂದ ಪಡೆದು ಸದರಿ ಪ್ರಸ್ತಾವನೆಯ ಮಂಜೂರಾತಿಗಾಗಿ ಆರ್ಥಿಕ ಇಲಾಖೆಯ ಸಹಮತಿಯನ್ನು ಕೋರಲಾಗಿತ್ತು. ಆದರೆ, ಆರ್ಥಿಕ ಇಲಾಖೆಯು ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿರುವುದಿಲ್ಲ.

ಸರ್ಕಾರದಿಂದ ದೊರೆತ ಉತ್ತರ

ಮಾತು ತಪ್ಪಿದ ಸರ್ಕಾರ: ಭರವಸೆ ಮರೆತ ಜನಪ್ರತಿನಿಧಿಗಳು

ಮಂಜೂರಾತಿ ಕೋರಿ ಮತ್ತೊಮ್ಮೆ ಕಡತವನ್ನು ಸಹಮತಿಗಾಗಿ ಆರ್ಥಿಕ ಇಲಾಖೆಗೆ ಕಳುಹಿಸಲಾಗುವುದು. ಅನುಮತಿ ದೊರತ ಬಳಿಕ ಅನುದಾನದ ಲಭ್ಯತೆಗೆ ಅನುಗುಣವಾಗಿ ಹೊಸದಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಲಿಖತ ಉತ್ತರ ಸಿಕ್ಕಿದೆ. ವೈದ್ಯಕೀಯ ಶಿಕ್ಷಣ ಸಚಿವರು ಅನಾರೋಗ್ಯದ ನಿಮಿತ್ತ ಸಭೆಗೆ ಗೈರಾಗಿದ್ದು, ವಾರದ ಬಳಿಕ ಮತ್ತೆ ಚರ್ಚೆಗೆ ಅವಕಾಶ ನೀಡುವುದಾಗಿ ವಿಧಾನಸಭಾಧ್ಯಕ್ಷರು ಇದೆ ವೇಳೆ ಭರವಸೆ ನೀಡಿದರು.

ಉತ್ತರಕನ್ನಡ ಜಿಲ್ಲೆಯ ಎಲ್ಲಾ ಶಾಸಕರು ಒಟ್ಟಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತರುವ ಬಗ್ಗೆ ಯೋಜನೆ ರೂಪಿಸಬೇಕಿದೆ. ಇಲ್ಲದಿದ್ರೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೋರಾಟ, ಪ್ರತಿಭಟನೆ ಜೋರಾಗುವ ಲಕ್ಷಣಗಳು ಕಂಡುಬರುತ್ತಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button