ಡಿಸೆಂಬರನಲ್ಲಿ ಕರಾವಳಿ ಉತ್ಸವ ಫಿಕ್ಸ್: ಮಯೂರವರ್ಮ ವೇದಿಕೆಯಲ್ಲಿ ನಡೆಯಲಿದೆ ಜಿಲ್ಲೆಯ ಬಹುದೊಡ್ಡ ಉತ್ಸವ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಡಲ ತೀರದಲ್ಲಿ ಡಿಸೆಂಬರ್ ನಲ್ಲಿ 3 ದಿನಗಳ ಕಾಲಕರಾವಳಿ ಉತ್ಸವ ನಡೆಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಡಿ. 16, 17, 18ರಂದು ದಿನ ನಿಗದಿಪಡಿಸಿದ್ದು ಈ ಕುರಿತು ನಿರ್ಣಯ ಬಹುತೇಕ ಅಂತಿಮವಾಗಿದೆ.
ಆಟವಾಡಲು ತೆರಳಿದ ವೇಳೆ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು: ಮುಗಿಲು ಮುಟ್ಟಿದ ಆಕ್ರಂದನ
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮಾರ್ಗದರ್ಶನದಂತೆ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಕರಾವಳಿ ಉತ್ಸವದ ರೂಪರೇಶೆಗಳ ಕುರಿತು ಚರ್ಚೆ ನಡೆಸಲಾಯಿತು. ನೂತನ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಡಿ ವೈ ಎಸ್ಪಿ ವೆಲೆಂಟೈನ್ ಡಿಸೋಜ, ಅಬಕಾರಿ ಉಪ ಆಯುಕ್ತರಾದ ವನಜಾಕ್ಷಿ ಎಂ, ಸೇರಿದಂತೆ ಇತರೆ ಇಲಾಖೆಗಳ ಹಿರಿ-ಕಿರಿಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು. ಕೋವಿಡ್ ಮತ್ತಿತರ ಕಾರಣಗಳಿಂದ ಕಳೆದ ಒಂದೆರಡು ವರ್ಷಗಳಲ್ಲಿ ಮಯೂರವರ್ಮ ವೇದಿಕೆಯ ಮೇಲೆ ದೊಡ್ಡ ಪ್ರಮಾಣದ ಕಾರ್ಯಕ್ರಮ ನಡೆಯದೇ ಇರುವುದರಿಂದ,ಈ ಬಾರಿಯ ಕರಾವಳಿ ಉತ್ಸವ ಜನರ ಉತ್ಸಾಹವನ್ನು ಹೆಚ್ಚಿಸುವಂತೆ ಮಾಡಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ