Join Our

WhatsApp Group
Important

ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಖೈದಿಯನ್ನು ಬಂಧಿಸಿದ ಪೊಲೀಸರು

ಶಿರಸಿ: ನಗರದ ಸಬ್ ಜೈಲಿನಲ್ಲಿ ಡಕಾಯಿತಿ ಪ್ರಕರಣದಲ್ಲಿ ವಿಚಾರಣಾಧೀನನಾಗಿದ್ದ ಖೈದಿಯೋರ್ವ ತಪ್ಪಿಸಿಕೊಂಡು ಪರಾರಿಯಾಗಿದ್ದ. ಮೂಲತಃ ಯಲ್ಲಾಪುರ ತಾಲೂಕಿನ ಜಡಹಲಗಿನ ಕೊಪ್ಪ ಗ್ರಾಮದ ನಿವಾಸಿಯಾಗಿದ್ದ ಪ್ರಕಾಶ್ ಕೃಷ್ಣ ಸಿದ್ದಿ ಎಂಬಾತ ಬಿಳಕಿ ಗ್ರಾಮದಲ್ಲಿ ನಡೆದ ಡಕಾಯಿತಿ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯಾಗಿದ್ದು, ಬೆಳಿಗ್ಗೆ ಜೈಲಿನಿಂದ ಪರಾರಿಯಾಗಿದ್ದ.

ಆದರೆ, ತಪ್ಪಿಸಿಕೊಂಡ ಆರೋಪಿಗಾಗಿ ಕಾರ್ಯಾಚರಣೆ ಆರಂಭಿಸಿದ ಪೊಲೀಸರು, ಕೊನೆಗೂ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಜಡ್ಡಿಮನೆ ಬಳಿ ವಶಕ್ಕೆ ಪಡೆದಿದ್ದು, ಶಿರಸಿ ಸಬ್ ಜೈಲಿಗೆ ರವಾನೆ ಮಾಡಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

Back to top button