ಉದ್ಯೋಗ ಹುಡುಕುತ್ತಿರುವವರಿಗೆ ಶುಭ ಸುದ್ದಿ. ಹೌದು, ಸಿಬ್ಬಂದಿ ನೇಮಕಾತಿ ಆಯೋಗವು ಇದೀಗ ಸೆಲೆಕ್ಷನ್ ಪೋಸ್ಟ್ ಫೇಸ್ 11 ಪರೀಕ್ಷೆ ಅಧಿಸೂಚನೆ ಬಿಡುಗಡೆ ಮಾಡಿದ್ದು, ಒಟ್ಟು 5,369 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಆಕರ್ಷಕ ಸಂಬಳವಿದ್ದು, 10ನೇ ತರಗತಿ, 12ನೇ ತರಗತಿ ಅಥವಾ ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಎಲ್ಲ ಅರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ.
ನೇಮಕಾತಿ ಅಧಿಸೂಚನೆಯ ಪ್ರಕಾರ ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 30 ವರ್ಷಗಳು ಅಭ್ಯರ್ಥಿಗಳು ಹೊಂದಿರಬೇಕು. ಎಸ್ಸಿ/ಎಸ್ಟಿ/ಅಂಗವಿಕಲ,ಮಹಿಳಾ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದ್ದು, ಇತರೆ ಎಲ್ಲಾ ಅಭ್ಯರ್ಥಿಗಳಿಗೆ ಶುಲ್ಕ ರೂ.100 ಶುಲ್ಕ ನಿಗದಿಪಡಿಸಲಾಗಿದೆ.
ಕಂಪ್ಯೂಟರ್ ಆಧಾರಿತ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ , ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಉಡುಪಿ , ಮೈಸೂರು, ಶಿವಮೊಗ್ಗ, ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಕೆ ದಿನಾಂಕ | 06-03-2023 |
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ | 27-03-2023 |
ಅಧಿಸೂಚನೆ ಓದಲು | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಒಟ್ಟು ಹುದ್ದೆಗಳು | 5,369 |
ಇನ್ನು ಹೆಚ್ಚಿನ ಉದ್ಯೋಗಾವಕಾಶದ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್