ಹೊನ್ನಾವರ: ಮನೆಯ ಕೋಣೆಯಲ್ಲಿ ಪತಿ ಪತ್ನಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಬೈಲಗದ್ದೆ ಸಮೀಪ ವರದಿಯಾಗಿದೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಪತಿ-ಪತ್ನಿ ಇಬ್ಬರು ಯಾವುದೋ ವಿಚಾರಕ್ಕೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೆಂಕ್ಟ ತಿಮ್ಮಪ್ಪ ನಾಯ್ಕ(65) ಹಾಗೂ ಗೋಪಿ ನಾಯ್ಕ(60) ಎಂಬುವವರೆ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.
CCL Recruitment 2023: ಉದ್ಯೋಗಾವಕಾಶ: SSLC ಆದವರು ಅರ್ಜಿ ಸಲ್ಲಿಸಿ: 31 ಸಾವಿರ ಆರಂಭಿಕ ವೇತನ
ಮನೆಯಲ್ಲಿ ಯಾರು ಇಲ್ಲದ ವೇಳೆ ಅಡಿಗೆ ಕೋಣೆಯ ಜಂತಿಗೆ ಇಬ್ಬರೂ ಒಟ್ಟಿಗೆ ಸೇರಿಕೊಂಡು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಮೃತದೇಹದ ಮರಣೊತ್ತರ ಪರೀಕ್ಷೆಯ ಬಳಿಕ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ