ಜೋಯಿಡಾ ತಾಲೂಕಿನ ಗ್ರಾಮ ಪಂಚಾಯತ ಅಧ್ಯಕ್ಷ ಉಪಾಧ್ಯಕ್ಷರ ಎರಡನೆ ಅವಧಿಯ ಅಧ್ಯಕ್ಷ- ಉಪಾಧ್ಯಕ್ಷರ ಮೀಸಲಾತಿ ಪ್ರಕಟ
ಜೊಯಿಡಾ : ತಾಲೂಕಿನ ಗ್ರಾಮ ಪಂಚಾಯತ ಅಧ್ಯಕ್ಷ ಉಪಾಧ್ಯಕ್ಷರ ಎರಡನೆ ಅವಧಿಯ ಅಧ್ಯಕ್ಷ- ಉಪಾಧ್ಯಕ್ಷರ ಮಿಸಲಾತಿ ಆಯ್ಕೆ ಪ್ರಕ್ರಿಯೆಯು ಇಂದು ಮಂಗಳವಾರ ಜೊಯಿಡಾ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.
೧೯೯೩ ಪಂಚಾಯತ ರಾಜ್ ಕಾಯಿದೆ ಜಾರಿಗೆ ಬಂದ ಮೇಲೆ ಮಿಸಲಾತಿ ಜಾರಿಗೆ ಬಂದಿದೆ. ಚುನಾವಣಾ ಆಯೋಗದ ಸ್ಪಷ್ಟ ನಿರ್ದೇಶನದಂತೆ ಆಯ್ಕೆ ನಡೆಯಲಿದೆ.ಚುನಾವಣಾ ಆಯೋಗ ಮಾಡಿದಂತ ತಂತ್ರಾಂಶದಲ್ಲಿ ಅಳವಡಿಸಿ ಅದರಂತೆ ಆಯ್ಕೆ ನಡೆಯಲಿದೆ ಎಂದು ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಮೋಗವೀರ ಮಾಹಿತಿ ನೀಡಿದರು.
ಅಖೇತಿ ಗ್ರಾಮ ಪಂಚಾಯತ ಅಧ್ಯಕ್ಷ ಸ್ಥಾನ ಬ ವರ್ಗದ ಮಹಿಳೆ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ , ಕಲಂಬುಲಿ (ಕ್ಯಾಸಲರಾಕ್) ಗ್ರಾ.ಪಂ ಅಧ್ಯಕ್ಷ ಸಾಮಾನ್ಯ ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಬಾಜಾರಕುಣಂಗ ಗ್ರಾ.ಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಉಪಾಧ್ಯಕ್ಷ ಸಾಮಾನ್ಯ, ಅಸು ಗ್ರಾ.ಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಉಪಾಧ್ಯಕ್ಷ ಸಾಮಾನ್ಯ, ರಾಮನಗರ ಗ್ರಾ.ಪಂ ಅಧ್ಯಕ್ಷ ಹಿಂದುಳಿದ ವರ್ಗ ಅ ಉಪಾಧ್ಯಕ್ಷ ಹಿಂದುಳಿದ ವರ್ಗ ಬ ಮಹಿಳೆ, ಶಿಂಗರಗಾಂವ ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಹಿಂದುಳಿದ ವರ್ಗ ಅ ಮಹಿಳೆ, ಜಗಲಬೇಟ ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಅವೇಡಾ ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಉಪಾಧ್ಯಕ್ಷ ಸಾಮಾನ್ಯ ಮಹಿಳೆ,ಪ್ರಧಾನಿ ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಉಪಾಧ್ಯಕ್ಷ ಸ್ಥಾನ ಪ. ಜಾತಿ ಮಹಿಳೆ, ನಾಗೋಡಾ ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಮಹಿಳೆ ಉಪಾಧ್ಯಕ್ಷ ಸಾಮಾನ್ಯ, ಜೋಯಿಡಾ ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ,ಕಾತೇಲಿ (ಕುಂಬಾರವಾಡಾ) ಗ್ರಾ.ಪಂ ಪ.ಜಾತಿ ಮಹಿಳೆ,ಉಪಾಧ್ಯಕ್ಷ ಹಿಂದುಳಿದ ವರ್ಗ ಅ, ಉಳವಿ ಗ್ರಾ.ಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಉಪಾಧ್ಯಕ್ಷ ಹಿಂದುಳಿದ ವರ್ಗ ಅ ಮಹಿಳೆ, ನಂದಿಗದ್ದೆ ಗ್ರಾ.ಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಅಣಶಿ ಗ್ರಾ.ಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಉಪಾಧ್ಯಕ್ಷ ಸಾಮಾನ್ಯ,ಗಾಂಗೋಡಾ ಗ್ರಾ.ಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಉಪಾಧ್ಯಕ್ಷ ಸಾಮಾನ್ಯ ಮೀಸಲಾತಿ ಆಯ್ಕೆ ಪ್ರಕ್ರಿಯೆಯಲ್ಲಿ ಬಂದಿದೆ.
ಈ ಸಂದರ್ಭದಲ್ಲಿ ಉ.ಕ ಜಿಲ್ಲಾಧಿಕಾರಿ ಪ್ರಬುಲಿಂಗ ಕವಳಿಕಟ್ಟಿ,ಅಪರ ಜಿಲ್ಲಾಧಿಕಾರಿ ರಾಜು ಮೋಗವೀರ, ಕಾರವಾರ ಎಸಿ ಜಯಲಕ್ಷ್ಮಿ ರಾಯಕೊಡ, ಜೊಯಿಡಾ ತಹಸಿಲ್ದಾರ ಬಸವರಾಜ ಟಿ ಮುಂತಾದವರು ಉಪಸ್ಥಿತರಿದ್ದರು.
ವಿಸ್ಮಯ ನ್ಯೂಸ್ ಜೋಯ್ಡಾ