Focus NewsImportant
ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿ, ವೈರ್ ನಿಂದ ಕುತ್ತಿಗೆ ಬಿಗಿದು ಕೊಲೆಗೆ ಯತ್ನ: ಮಗುವಿನ ಕೂಗಾಟ ಕೇಳಿ ಓಡಿಬಂದ ಪೋಷಕರು
ಆರೋಪಿಯನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ ಸಾರ್ವಜನಿಕರು
ಶಿರಸಿ: ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿದ ಯುವಕನನ್ನು ಬಂಧಿಸಿದ ಘಟನೆ ನಗರದಲ್ಲಿ ನಡೆದಿದೆ. ಶಿವು (26) ಎಂಬಾತನೇ ಬಂಧಿತ ಆರೋಪಿಯಾಗಿದ್ದು , ಈತನ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ. ಈತ ಶಿರಸಿ ನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಮನೆಯ ಪಕ್ಕದಲ್ಲೇ ಇದ್ದ ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿ, ವೈರ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದ್ದ. ಈ ವೇಳೆ ಮಗು ಅಳುವ ಶಬ್ದ ಕೇಳಿ ಸಾರ್ವಜನಿಕರು ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳದಿಂದ ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಆರೋಪಿಯನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.
ಈತ ಕಳೆದ ಹಲವು ದಿನಗಳಿಂದ ಬಾಲಕಿಗೆ ದೈಹಿಕ ಹಿಂಸೆ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ಘಟನೆ ಸಂಬoಧ ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ವಿಸ್ಮಯ ನ್ಯೂಸ್, ಶಿರಸಿ