ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ
ಆರು ವಿದ್ಯಾರ್ಥಿಗಳು ಪ್ರಥಮ
ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 71.80 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಚಿಕ್ಕಾಬಳ್ಳಾಪುರ ಜಿಲ್ಲೆಗೆ ಪ್ರಥಮಸ್ಥಾನ ಲಭಿಸಿದ್ದು, ಬೆಂಗಳೂರು ಗ್ರಾಮಾಂತರ ದ್ವಿತೀಯ, ಮಧುಗಿರಿ ತೃತೀಯ ಸ್ಥಾನ ಪಡೆದಿದೆ. ವಿಶೇಷ ಅಂದ್ರೆ ಈ ಬಾರಿ ಆರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಶಿರಸಿ ತಾಲೂಕಿನ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ಸನ್ನಿಧಿ ಮಹಾಬಲೇಶ್ವರ ಹೆಗಡೆ ಕೂಡಾ, ಈ ಆರು ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದಾರೆ. ಸನ್ನಿಧಿ ಹೆಗಡೆ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು, ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾಳೆ.
ಶಿರಸಿಯ ಪ್ರಗತಿ ನಗರದ ಮಹಾಬಲೇಶ್ವರ ಹೆಗಡೆ ಹಾಗೂ ವೀಣಾ ಹೆಗಡೆ ದಂಪತಿಯ ಪುತ್ರಿಯಾಗಿರುವ ಸನ್ನಿಧಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದು, ಅವರ ತಂದೆ ಕಾರವಾರದ ಆರೋಗ್ಯ ಇಲಾಖೆಯಲ್ಲಿ ಹಿರಿಯ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದೇ ವೇಳೆ, ಸಿದ್ದಾಪುರದ ಅನಿರುದ್ಧ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಸಾಧನೆಗೈದಿದ್ದಾನೆ. ಕರೋನಾ ಮಹಾಮಾರಿಯ ನಡುವೆಯೇ ಶಿಕ್ಷಣ ಇಲಾಖೆ ಹತ್ತನೇ ತರಗತಿಯ ಪರೀಕ್ಷೆಯನ್ನು ನಡೆಸಿದ್ದು ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿತ್ತು.
ವಿಸ್ಮಯ ನ್ಯೂಸ್, ಶಿರಸಿ
ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.