Big News
Trending

Gandhi Jayanti: ಗಾಂಧೀಜಯಂತಿಯಂದು “ಸ್ವಚ್ಛತೆಗಾಗಿ ಒಂದು ಹೆಜ್ಜೆ” ಅಭಿಯಾನ

ಶಿರಸಿ: ದೀನದಯಾಳ್ ಟ್ರಸ್ಟ್ ವತಿಯಿಂದ ಅಕ್ಟೋಬರ್ 2 ಗಾಂಧೀಜಯಂತಿ (Gandhi Jayanti)ಯಂದು “ಸ್ವಚ್ಛತೆಗಾಗಿ ಒಂದು ಹೆಜ್ಜೆ” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ನಗರದ ದೀನದಯಾಳ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಸ್ವಚ್ಛ ಭಾರತ ಅಭಿಯಾನ ಕ್ಕೆ ಚಾಲನೆ ನೀಡಿದರು. ಈ ಅಭಿಯಾನದಿಂದ ದೇಶದ ಜನರಲ್ಲಿ ಜಾಗೃತಿ ಮೂಡಿಸಿದೆ.

ಜನಾಂದೋಲನವಾಗಿ ರೂಪಿತ ಗೊಂಡಿದೆ. ( Gandhi Jayanti) ಅಭಿಯಾನಕ್ಕೆ ಚಾಲನೆ ನೀಡಿ ಸುಮ್ಮನಾಗದೆ ಅದಕ್ಕೆ ಬೇಕಾದ ಯೋಜನೆಗಳನ್ನೂ ಜಾರಿಗೆ ತಂದು ಪ್ರೇರಣೆ ನೀಡಿದ್ದಾರೆ. ಅಕ್ಟೋಬರ್ 2ರಂದು ಜಿಲ್ಲಾದ್ಯಂತ ಅಭಿಯಾನ ನಡೆಸಲು ಚಿಂತನೆ ನಡೆಸಲಾಗಿದ್ದು ಶಿರಸಿ ಸಿದ್ದಾಪುರ ತಾಲೂಕಿನಲ್ಲಿ ಸಿದ್ದತೆಗಳು ನಡೆಯುತ್ತಿವೆ.

ಗ್ರಾಮೀಣ ಭಾಗದಲ್ಲಿ ಪ್ರತಿ ಪಂಚಾಯಿತಿ ಮಟ್ಟದಲ್ಲಿ ಹಾಗೂ ನಗರ ಭಾಗದಲ್ಲಿ ಪ್ರತಿ ವಾರ್ಡ್ ನಲ್ಲಿ ಸಭೆ ನಡೆಸಿ ಸಂಘಟಿಸಲು ತೀರ್ಮಾನಿಸಲಾಗಿದೆ. ನಿರ್ದಿಷ್ಟ ಸ್ಥಳದಲ್ಲೇ ಸ್ವಚ್ಛತಾ ಕಾರ್ಯ ನಡೆಸಬೇಕು ಎಂಬ ನಿಯಮವಿಲ್ಲ ಆದರೆ ಎಲ್ಲೇ ನಡೆಸಿದರೂ ಗುಂಪಿನಲ್ಲೇ ಸ್ವಚ್ಛತಾ ಕಾರ್ಯ ಮಾಡಬೇಕು. ಜನಸಮುದಾಯದಲ್ಲಿ ಸ್ವಚ್ಛತೆಯ ಬಗ್ಗೆ ಇನ್ನಷ್ಟು ಅರಿವು ಮೂಡಿಸುವುದೇ ನಮ್ಮ ಉದ್ದೇಶವಾಗಿದೆ ಎಂದರು.

ಭಾರತೀಯ ಜನತಾ ಪಾರ್ಟಿ ಇದೊಂದು ರಾಷ್ಟ್ರೀಯ ಪಕ್ಷವಾಗಿ ಬೃಹದಾಕಾರವಾಗಿ ಬೆಳೆದು ನಿಂತಿದೆ. ಪಕ್ಷ ಸಂಘಟನೆ ಯಲ್ಲಿ ಕೆಲವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಪಕ್ಷದ ಹಿರಿಯರು ಕ್ರಮ ಕೈಗೊಂಡಿದ್ದಾರೆ.ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಮತ್ತೆ ಪಕ್ಷ ಸಂಘಟನೆ ಯಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ವಿಸ್ಮಯ ನ್ಯೂಸ್, ಶಿರಸಿ

Back to top button