ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ; ಸಚಿವ ಮಂಕಾಳ ವೈದ್ಯರಿಗೆ ಅನಂತಮೂರ್ತಿ ಹೆಗಡೆ ಸವಾಲ್
ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಹಾಗೂ ಜಿಲ್ಲೆಯ ಯುವಕರಿಗೆ ಉದ್ಯೋಗ ಸೃಷ್ಠಿಸಬೇಕೆಂದು ಆಗ್ರಹಿಸಿ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ನ ಸಂಸ್ಥಾಪಕರು, ಸಮಾಜಿಕ ಹೋರಾಟಗಾರರಾದ ಅನಂತಮೂರ್ತಿ ಹೆಗಡೆ ಅವರ ನೇತೃತ್ವದಲ್ಲಿ ಕುಮಟಾದಿಂದ ಭಟ್ಕಳದವರೆಗೆ ಉತ್ತರ ಕನ್ನಡ ಜಿಲ್ಲೆಯ ಜನರ ಸ್ವಾಭಿಮಾನದ ಪಾದಯಾತ್ರೆಯನ್ನು ಆರಂಭಿಸಿದ್ದಾರೆ. ಹಿಂದಿನ ಬಿ.ಜೆ.ಪಿ ಸರ್ಕಾರದಲ್ಲಿ ಘೋಷಣೆ ಆಗಿದ್ದ ಕುಮಟಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ತಕ್ಷಣ ಹಣ ಬಿಡುಗಡೆಗೆ ಆಹಗ್ರಹಿಸಿ 3 ದಿನಗಳ ಕಾಲ ನಡೆಯಲಿರುವ ಈ ಪಾದಯಾತ್ರೆಗೆ ಕುಮಟಾದ ಮಾಸ್ತಿಕಟ್ಟೆಯಲ್ಲಿ ಚಾಲನೆ ನೀಡಲಾಯಿತು. ಮೊದಲಿಗೆ ಶ್ರೀ ಮಹಾಸತಿ ದೇವರಿಗೆ ಪೂಜೆ ಸಲ್ಲಿಸಲಾಯಿತು.
ಬಳಿಕ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಅನಂತಮೂರ್ತಿ ಹೆಗಡೆ ಅವರು ನಮ್ಮ ಜಿಲ್ಲೆಯ ಜನರ ಸಂಕಷ್ಟಗಳನ್ನು ಅರಿತು ಶಿರಸಿಯಿಂದ ಇಲ್ಲಿಗೆ ಬಂದು ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ಪ್ರಾಮಾಣಿಕತೆಯಿಂದ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಅನಂತಮೂರ್ತಿ ಅವರ ಬೆಂಬಲಕ್ಕೆ ಸದಾ ನಾನಿರುತ್ತೆನೆ. ಜೊತೆಗೆ ಈ ವಿಷಯಕ್ಕೆ ಸಂಬAಧಿಸಿAತೆ ಸರ್ಕಾರದ ಮೇಲೆ ಒತ್ತಡ ತರುವ ಕಾರ್ಯವನ್ನು ಕೂಡ ನಾನು ಮಾಡುತ್ತೆನೆ ಎಂದು ಭರವಸೆ ನೀಡಿದರು.
ಈ ವೇಳೆ ಮತನಾಡಿದ ಅನಂತಮೂರ್ತಿ ಹೆಗಡೆ ಅವರು, ಜಿಲ್ಲೆಯ ಜನರ ಬಹು ವರ್ಷಗಳ ಬೇಡಿಕೆಯಾದ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ಕುಮಟಾದಿಂದ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಇಂದು ಕುಮಟಾದಿಂದ ಹೊನ್ನಾವರದ ವರೆಗೆ, ನಾಳೆ ಹೊನ್ನಾವರಿಂದ ಮುರ್ಡೆಶ್ವರದ ವರೆಗೆ ಹಾಗೂ ನಾಡಿದ್ದು ಮುರ್ಡೆಶ್ವರದಿಂದ ಭಟ್ಕಳದ ಸಚಿವರ ಕಚೇರಿಯವರೆಗೆ ಪಾದಯಾತ್ರೆ ನಡೆಸಲಿದ್ದೇವೆ ಎನ್ನುತ್ತಾ ಪಾದಯಾತ್ರೆ ಉದ್ದೇಶದ ಕುರಿತಾಗಿ ಸಂಕ್ಷಿಪ್ತ ವಿವರಣೆ ನೀಡಿದರು.
ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರರು ಹಾಗೂ ನ್ಯಾಯವಾಧಿಗಳಾದ ಆರ್.ಜಿ ನಾಯ್ಕ ಅವರು ಮಾತನಾಡಿ, ಬೇಡದೇ ಇರುವ ಯೋಜನೆಗಳು ಸರ್ಕಾರದ ಮೂಲಕ ಉತ್ತರ ಕನ್ನಡ ಜಿಲ್ಲೆಗೆ ಬರುತ್ತಿದೆ. ಆದರೆ ಅತಿ ಅವಶ್ಯವಾದ ಮಲ್ಟು ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾತ್ರ ಇದುವರೆಗೆ ಆಗಿಲ್ಲ. ಈ ನಿಟ್ಟಿನಲ್ಲಿ ಅನಂತಮೂರ್ತಿ ಹೆಗಡೆ ಅವರು ಕುಮಟಾದಿಂದ ಭಟ್ಕಳದ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಯಾತ್ರೆಗೆ ಎಲ್ಲರೂ ಸಹಕಾರ ನೀಡಿ ಹಾಗೂ ಪಾದಯಾತ್ರೆ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.
ಪಾದಯಾತ್ರೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗಜು ಪೈ, ಶಿವಾನಂದ ಹೆಗಡೆ ಕಡತೋಕಾ ಸೇರಿದಂತೆ ಅನೇಕ ಗಣ್ಯರು, ವಿವಿಧ ಸಂಘಟನೆಗಳ ಪ್ರಮುಖರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿದ್ದರು.
ವಿಸ್ಮಯ ನ್ಯೂಸ್, ಯೋಗೇಶ ಮಡಿವಾಳ, ಕುಮಟಾ