ಸಿದ್ದಾಪುರ: ತಾಲೂಕಿನಲ್ಲಿ ಮಂಗನ ಕಾಯಿಲೆಗೆ ( Kyasanur Forest Disease) ಎರಡನೇ ಬಲಿಯಾಗಿದೆ. ಕೊರ್ಲಕ್ಯೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ 60ವರ್ಷದ ಮಹಿಳೆ ಶಿವಮೊಗ್ಗ ಮೆಗ್ಗಾನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮೂರು ದಿನದ ಹಿಂದೆ ಪುನಃ ಮೆಗ್ಗಾನ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಳು. ತಾಲೂಕಿನಲ್ಲಿ ಒಂದೇ ವಾರದಲ್ಲಿ ಇಬ್ಬರು ಮಂಗನ ಕಾಯಿಲೆಯಿಂದ ಸಾವನ್ನಪ್ಪಿದಂತಾಗಿದೆ. ತಾಲೂಕಿನಲ್ಲಿ ಇಲ್ಲಿಯವರೆಗೆ 43 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದರಿಂದ ಉತ್ತರಕನ್ನಡದ ಸಿದ್ದಾಪೂರ ತಾಲೂಕಿನಲ್ಲಿ ಮಂಗನ ಕಾಯಿಲೆ ( Kyasanur Forest Disease) ಆತಂಕ ಹೆಚ್ಚಾಗಿದೆ. ಐದು ದಿನಗಳ ಹಿಂದಷ್ಟೇ ಸಿದ್ದಾಪುರ ತಾಲೂಕಿನ ಮಹಿಳೆ ಮೃತಪಟ್ಟಿದ್ದರು. ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಇದೀಗ ಎರಡನೇ ಸಾವು ಸಂಭವಿಸಿದೆ.
ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ