BMTC Recruitment 2024: 2,500 ಹುದ್ದೆಗಳು: ಪಿಯುಸಿ, ಡಿಪ್ಲೊಮಾ ಆದವರು ಅರ್ಜಿ ಸಲ್ಲಿಸಬಹುದು
ಮಾಸಿಕ ವೇತನ 18,660 ರಿಂದ 25,300 ರೂಪಾಯಿ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ( BMTC Recruitment 2024) ಒಟ್ಟು 2,503 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನಿರ್ವಾಹಕ, ಸಹಾಯಕ ಲೆಕ್ಕಿಗ, ಸ್ಟಾಫ್ ನರ್ಸ, ಫಾರ್ಮಸಿಸ್ಟ್ ಹುದ್ದೆಗಳ ನೇಮಕಾತಿಗಾಗಿ ನಡೆಯಲಿದೆ. ಮಾಸಿಕ ವೇತನ 18,660 ರಿಂದ 25,300 ರೂಪಾಯಿ ಇರಲಿದೆ.
( BMTC Recruitment 2024) ಅಧಿಸೂಚನೆಯ ಮಾಹಿತಿ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿಯಲ್ಲಿ ( ಆರ್ಟ್ಸ್, ಸೈನ್ಸ್, ಕಾಮರ್ಸ್ನಲ್ಲಿ ) ಉತ್ತೀರ್ಣರಾದ ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ದ್ವಿತೀಯ ಪಿಯುಸಿ ಪಾಸ್ ಅಥವಾ ಐಸಿಎಸ್‌ಇ / ಸಿಬಿಎಸ್‌ಇ ಹನ್ನೆರಡನೇ ತರಗತಿ ಪಾಸ್, ಅಥವಾ 3 ವರ್ಷಗಳ ಡಿಪ್ಲೊಮ ಪಾಸ್ ಆದವರು ಅರ್ಜಿ ಸಲ್ಲಿಸಬಹುದು,
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( BMTC) ಅಧಿಸೂಚನೆಯ ನಿಯಮಗಳ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರ ಬಾರದು. ಮಾರ್ಚ್ 10, 2024 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 10, 2024 ಅರ್ಜಿ ಸಲ್ಲಿಕೆಗೆ ಕೊನೆಯದಿನವಾಗಿದೆ.
ಸಂಸ್ಥೆ | ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ |
ವೇತನ | 18,660 ರಿಂದ 25,300 |
ಹುದ್ದೆಗಳ ಸಂಖ್ಯೆ | 2500 |
ಉದ್ಯೋಗ ಸ್ಥಳ | ಬೆಂಗಳೂರು |
ನಿರ್ವಾಹಕರ ನೇಮಕಾತಿ ವಿಧಾನ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಎರಡು ಪತ್ರಿಕೆಗಳಿಗೆ ತಲಾ 100 ಗಳಿಗೆ ನಡೆಸಲಾಗುತ್ತದೆ. ಇದರಲ್ಲಿನ ಶೇಕಡಾ 75 ಅಂಕಗಳು ಹಾಗೂ ಶೈಕ್ಷಣಿಕ ಅರ್ಹತೆ ಶೇಕಡಾ 25 ಅಂಕಗಳನ್ನು ಸೇರಿಸಿ ಮೆರಿಟ್ ಆಧಾರದ ಮೇಲೆ 1:5 ಅನುಪಾತದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
Bengaluru Metropolitan Transport Corporation: ಮಾರ್ಚ್ 10 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ, ಆನ್‌ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು. ( BMTC) ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಒಂದು ವರ್ಷ ಕಾಲ ವೃತ್ತಿ ತರಬೇತಿಯಾಗಿ ನಿಯೋಜಿಸಲಾಗುವುದು ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ.
ಅಧಿಸೂಚನೆ ಓದಲು | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್‌ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಕೆ ಆರಂಭ | ಮಾರ್ಚ್ 10, 2024 |
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | ಏಪ್ರಿಲ್ 10, 2024 |
ಇನ್ನು ಹೆಚ್ಚಿನ ಉದ್ಯೋಗಾವಕಾಶದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್