ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ( HAL Recruitment) ಹಲವು ಉದ್ಯೋಗಾವಕಾಶಗಳು ಖಾಲಿಯಿವೆ. ಒಟ್ಟು 182 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜೂನ್ 12, 2024 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಧಿಸೂಚನೆಯ ಮಾಹಿತಿ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಕನಿಷ್ಠ 43 ಸಾವಿರ ಮಾಸಿಕ ವೇತನ ನಿಗದಿಯಾಗಿದೆ.
ಇದನ್ನೂ ಓದಿ: ಉದ್ಯೋಗಾವಕಾಶದ ಕುರಿತ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
46 ತಂತ್ರಜ್ಞ ಹುದ್ದೆಗಳು ಮತ್ತು 136 ಆಪರೇಟರ್ ಹುದ್ದೆಗಳಿಗೆ ( HAL Recruitment) ನೇಮಕಾಗಿ ನಡೆಯಲಿದೆ. ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಮತ್ತು ಗರಿಷ್ಠ 28 ವರ್ಷ ವಯೋಮಿತಿ ನಿಗದಿಯಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ವೈಯಕ್ತಿಕವಾಗಿ ಅಥವಾ ಅಂಚೆ ಮೂಲಕ ಯಾವುದೇ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಸಂಸ್ಥೆ | ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ |
ಹುದ್ದೆಗಳ ಸಂಖ್ಯೆ | 182 |
ವಯೋಮಿತಿ | ಕನಿಷ್ಠ 18 ವರ್ಷ ಮತ್ತು ಗರಿಷ್ಠ 28 |
ಅರ್ಜಿ ಸಲ್ಲಿಕೆ ವಿಧಾನ | Online |
ಕರೆಸ್ಪಾಂಡೆನ್ಸ್, ಅರೆಕಾಲಿಕ, ದೂರಶಿಕ್ಷಣ, ಇ-ಲರ್ನಿಂಗ್ ಮೋಡ್ ಅಡಿಯಲ್ಲಿ ಪಡೆದ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಪೂರ್ಣ ಸಮಯದ ಮಾಧ್ಯಮದ ಮೂಲಕ ನಿಗದಿತ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಲಿಖಿತ ಪರೀಕ್ಷೆಗೆ ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕಿದೆ. ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಬದಲಾಗಿದ್ದು, ಡಿಪ್ಲಾಮಾ, ಐಟಿಐ ಆದವರು ಅರ್ಜಿ ಸಲ್ಲಿಸಬಹುದಾಗಿದೆ.
ಪರೀಕ್ಷೆಯು ಮೂರು ಭಾಗಗಳಲ್ಲಿರುತ್ತದೆ, ಲಿಖಿತ ಪರೀಕ್ಷೆಯು ಎರಡೂವರೆ ಗಂಟೆಗಳಿರುತ್ತದೆ. ಬಹುಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ ಎಂದು ಮಾಹಿತಿ ನೀಡಲಾಗಿದೆ. ಲಿಖಿತ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಕರೆಯಲಾಗುತ್ತದೆ. ಎಲ್ಲಾ ದಾಖಲೆಗಳ ಪರಿಶೀಲನೆ ಬಳಿಕ ಸಂದರ್ಶನ ನಡೆಸಿ, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಸೂಚನೆ ಓದಲು | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಕೆಗೆ ಕೊನೆಯ ದಿನ | ಜೂನ್ 12, 2024 |
ಇನ್ನು ಹೆಚ್ಚಿನ ಉದ್ಯೋಗಾವಕಾಶ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಸಂದೇಶ್ ಎನ್ ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್