ಹೊನ್ನಾವರ: ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈಗಾಗಲೇ ಮಳೆಯ ಅಬ್ಬರಕ್ಕೆ ಅವಾಂತರಗಳ ಸುರಿಮಳೆಯೇ ಸೃಷ್ಟಿಯಾಗಿವೆ. ಹೊನ್ನಾವರ ತಾಲೂಕಿನಲ್ಲಿಯೂ ಕೂಡ ವರುಣನ ಅಬ್ಬರಕ್ಕೆ ಜನತೆ ಹೈರಾಣಾಗಿ ಹೋಗಿದ್ದಾರೆ. ತಾಲೂಕಿನಲ್ಲಿ ಈಗಾಗಲೇ ಸತತವಾಗಿ ಸುರಿಯುತ್ತಿರುವ ಮಳೆಗೆ ಹಲವು ಗ್ರಾಮಗಳು ಜಲಾವೃತವಾಗಿದ್ದು, ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹೊನ್ನಾವರದ ತುಳಸಿನಗರದ ನಿವಾಸಿ ದಿನಕರ ಮೇಸ್ತ್ ಎಂಬುವವರ ಮನೆಗೆ ಮಳೆ ನೀರು ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಮನೆಗೆ ನೀರು ನುಗ್ಗಿದ್ದರಿಂದ ಮನೆಯಲ್ಲಿರೋ ಗೃಹೋಪಯೋಗಿ ವಸ್ತುಗಳ ನೀರಿಗೆ ಆಹುತಿಯಾಗಿವೆ. ಈ ಬಗ್ಗೆ ವಿಸ್ಮಯ ಟಿ.ವಿಯೊಂದಿಗೆ ಸಂತ್ರಸ್ಥ ದಿನಕರ ಮೇಸ್ತ್ ಮಾತನಾಡಿ, ಕಳೆದ 5 ವರ್ಷಗಳಿಂದಲೂ ಕೂಡ ಇದೇ ಪರಿಸ್ಥಿತಿಯಲ್ಲೇ ಕಾಲ ಕಳೆಯುವಂತಾಗಿದೆ.
ಈ ಬಗ್ಗೆ ಸಾಕಷ್ಟು ಬಾರಿ ಪ.ಪಂಚಾಯತಿ ಗಮನಕ್ಕೆ ತಂದಿದ್ದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಯಾವುದೇ ಅಧಿಕಾರಿಗಳು ನಮ್ಮ ಮನೆಗೆ ಬಂದಿಲ್ಲ. ಅವೈಜ್ಞಾನಿಕ ಚರಂಡಿ ಕಾಮಗಾರಿ ಮಾಡಿದ್ದರಿಂದ ಈ ರೀತಿಯ ಮನೆಗೆ ನೀರು ನುಗ್ಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಇನ್ನು ರಸ್ತೆ ನಿರ್ಮಾಣ ಮಾಡುವಾಗ ಹೊಸ ಚರಂಡಿ ಮಾಡುವ ವೇಳೆ ಅದೇ ಬಡಾವಣೆಯ ವ್ಯಕ್ತಿಯೊಬ್ಬರು ಅದು ನಮ್ಮ ಜಾಗ, ಅದರಲ್ಲಿ ನಾನು ಚರಂಡಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ತಕರಾರು ತೆಗೆದಿದ್ದಾರೆ.
ಆದ್ರಿಂದ ಮಳೆಗಾಲದಲ್ಲಿ ಚರಂಡಿ ನೀರು ಮನೆಗೆ ನೀರು ನುಗ್ಗಿ ಸಮಸ್ಯೆ ಉಂಟಾಗ್ತಿದೆ. ಕೂಡಲೇ ಈ ಸಮಸ್ಯೆ ಬಗೆಹರಿಸಿಕೊಡುವಂತೆ ಮನವಿ ಮಾಡಿಕೊಂಡ್ರು.. ಒಟ್ನಲ್ಲಿ ವರುಣಾರ್ಭಟಕ್ಕೆ ತಾಲೂಕಿನಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿವೆ. ಇನ್ನಾದ್ರೂ ಸಂಭoದಪಟ್ಟ ಇಲಾಖೆ ಅಧಿಕಾರಿಗಳು ಜನರ ಕಷ್ಟಕ್ಕೆ ಮುಂದಾಗ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.
ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ