ಶಿರಸಿ: ನಗರದಲ್ಲಿ ಅತಿವೇಗವಾಗಿ ವಾಹನ ಚಲಾಯಿಸುವ ಸವಾರರನ್ನು ನಿಯಂತ್ರಿಸಲು ಪೋಲೀಸರು ರಾಡಾರ್ ಗನ್ ಕಾರ್ಯಚರಣೆಯನ್ನು ಆರಂಭಿಸಿದ್ದಾರೆ. ನಗರ ಠಾಣಾ ಪಿಎಸ್‌ಐ ನಾಗಪ್ಪ ಬಿ. ಅವರ ನೇತೃತ್ವದಲ್ಲಿ ಕಾರ್ಯಚರಣೆಯನ್ನು ನಡೆಸಲಾಗಿದೆ. ಭಾನುವಾರ ಬನವಾಸಿ ರಸ್ತೆಯಲ್ಲಿ ಕಾರ್ಯಾಚರಣೆಯನ್ನು ನಡೆಸಿದ ಪೋಲೀಸರು ಅತಿವೇಗವಾಗಿ ವಾಹನ ಚಲಾಯಿಸಿದ ಮೂವರ ಮೇಲೆ ಪ್ರಕರಣ ದಾಖಲಿಸಿ 3 ಸಾವಿರ ರೂ ದಂಡ ವಿಧಿಸಿದ್ದಾರೆ.
ಶಿರಸಿ ನಗರ ವ್ಯಾಪ್ತಿಯಲ್ಲಿ ವಾಹನಗಳ ವೇಗದ ಮಿತಿ ಗಂಟೆಗೆ 40 ಕಿ.ಮೀ. ಹಾಗೂ ಮಾರುಕಟ್ಟೆ ಪ್ರದೇಶದಲ್ಲಿ ಗಂಟೆಗೆ 35 ಕಿ.ಮೀ. ಗರಿಷ್ಠ ವೇಗ ನಿಗದಿ ಪಡಿಸಲಾಗಿದೆ. ಅತಿವೇಗವಾಗಿ ವಾಹನ ಚಲಾಯಿಸುವ ಸವಾರರ ಮೇಲೆ ಕಠಿಣ ಕ್ರಮ ಕೈಗೊಳ್ಳಲಗುವುದು ಎಮದು ಶಿರಸಿ ಉಪ ವಿಭಾಗದ ಡಿವೈಎಸ್ಪಿ ಗಣೇಶ ಕೆ.ಎಲ್ ಅವರು ಎಚ್ಚರಿಕೆ ನೀಡಿದ್ದಾರೆ.
ವಿಸ್ಮಯ ನ್ಯೂಸ್, ಶಿರಸಿ