ಸಿದ್ದಾಪುರ: ಕ್ರೀಡೆ ಎನ್ನುವುದು ಪ್ರತಿಯೊಬ್ಬರಲ್ಲೂ ಅಂತರ್ಗತವಾಗಿದೆ. ವಿದ್ಯಾರ್ಥಿಗಳು ಮೊಬೈಲ್ ವ್ಯಸನಿಗಳಾಗದೆ, ಹೊರಾಂಗಣ ಕ್ರೀಡೆಗಳನ್ನು ರೂಢಿಸಿಕೊಂಡಲ್ಲಿ ಬೌದ್ಧಿಕವಾಗಿಯೂ ಪ್ರಭಲರಾಗಲು ಸಾದ್ಯ ಎಂದು ಟಿ.ಎಮ್.ಎಸ್. ಅಧ್ಯಕ್ಷ ಆರ್.ಎಮ್ ಹೆಗಡೆ ಬಾಳೆಸರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ತಾಲೂಕಿನ ಹಳ್ಳಿಬೈಲ್ ಪ್ರೌಢಶಾಲಾ ಆವರಣದಲ್ಲಿ ಬಿಳಗಿ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದರು.
ಸೋವಿನಕೊಪ್ಪ ಗ್ರಾ.ಪಂ. ಅಧ್ಯಕ್ಷೆ ಸುಮಾ ಗೌಡ ಕಿಲವಳ್ಳಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತ್ರಿ, ಗ್ರಾ.ಪಂ. ಉಪಾಧ್ಯಕ್ಷ ಗಿರೀಶ ಶೇಟ್, ಕ್ಯಾದಗಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಮ್.ಜಿ .ನಾಯ್ಕ, ಮತ್ತಿತರರು ಉಪಸ್ಥಿತರಿದ್ದರು.
ಉದ್ಘಾಟನೆ ಕಾರ್ಯಕ್ರಮದ ನಂತರ ಸುರಿಯುತ್ತಿರುವ ಮಳೆ ನಡುವೆಯೂ ವಿವಿಧ ಕ್ರೀಡೆಗಳಲ್ಲಿ ವಿದ್ಯಾರ್ಥಿ ಗಳು ಉತ್ಸಾಹದಿಂದ ಪಾಲ್ಗೊಂಡರು, ಸ್ನೇಹಿತರು ಕ್ರೀಡಾಭಿಮಾನಿಗಳು ಶಿಳ್ಳೆ ಚಪ್ಪಾಳೆ ಯೊಂದಿಗೆ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿದರು ಕ್ರೀಡಾಂಗಣದ ಸುತ್ತಲೂ ಸಂಭ್ರಮದ ವಾತಾವರಣ ಕಂಡು ಬಂದಿತು.