Join Our

WhatsApp Group
Job News
Trending

ನೇಮಕಾತಿ: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ: Canara Bank Recruitment

ಕೆನರಾ ಬ್ಯಾಂಕ್ ನಲ್ಲಿ 3 ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ

Canara Bank Recruitment: ಸರ್ಕಾರಿ ಉದ್ಯೋಗಾವಕಾಶ ಹುಡುಕುತ್ತಿರುವವರಿಗೆ ಶುಭಸುದ್ದಿ. ಕೆನರಾ ಬ್ಯಾಂಕ್ ನಲ್ಲಿ 3 ಸಾವಿರಕ್ಕೂ ಅಧಿಕ ( ನೇಮಕಾತಿ) ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನಿಸಲಾಗಿದೆ. ಅಧಿಕೃತ ಅಧಿಸೂಚನೆಯ ಮಾಹಿತಿಯಂತೆ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Job Alert: ಉದ್ಯೋಗಾವಕಾಶ: 1 ಲಕ್ಷದ ವರೆಗೆ ವೇತನ: SSLC, ಡಿಪ್ಲೋಮಾ, ಪದವಿ ಆದವರು ಅರ್ಜಿ ಸಲ್ಲಿಸಿ

ನೇಮಕಾತಿ: ಸೆಪ್ಟೆಂಬರ್ 21, 2024 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಕ್ಟೋಬರ್ 4, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ಪೂರೈಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೆನರಾ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.

ಸಂಸ್ಥೆ ಕೆನರಾ ಬ್ಯಾಂಕ್ : Canara Bank – Banking company
ಒಟ್ಟು ಹುದ್ದೆಗಳು3 ಸಾವಿರ
ಹುದ್ದೆ ವಿವರ ಗ್ರಾಜುಯೇಟ್ ಅಪ್ರೆಂಟಿಸ್‌ಗಳು
ವಿದ್ಯಾರ್ಹತೆ ಪದವಿ
ವಯಸ್ಸಿನ ಮಿತಿಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ

Canara Bank Recruitment: ಅರ್ಜಿ ಸಲ್ಲಿಸುವುದು ಹೇಗೆ? ಸೆಪ್ಟೆಂಬರ್ 21, 2024 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಸೆಪ್ಟೆಂಬರ್ 21 ರಿಂದ ಕೆನರಾ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಗೆ https://canarabank.com ಭೇಟಿ ನೀಡಿ, ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಈ ಸಂಬoಧ ಕಿರು ಅಧಿಸೂಚನೆ ಹೊರಡಿಸಲಾಗಿದೆ.

ಅರ್ಜಿ ಸಲ್ಲಿಕೆ ಆರಂಭ ಸೆಪ್ಟೆಂಬರ್ 21, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಅಕ್ಟೋಬರ್ 4, 2024
ಅಧಿಕೃತ ವೆಬ್‌ಸೈಟ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಕಿರು ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಕೆ ಬಳಿಕ ಪರಿಶೀಲನೆ ನಡೆಯಲಿದೆ. ಬಳಿಕ ಆನ್‌ಲೈನ್ ಪರೀಕ್ಷೆ ಮತ್ತು ಸ್ಥಳೀಯ ಭಾಷಾ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳ ಪಟ್ಟಿಯನ್ನು ( Short List ) ಮಾಡಲಾಗುತ್ತದೆ. ಇನ್ನು ಹೆಚ್ಚಿನ ಉದ್ಯೋಗಾವಕಾಶದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button