ಲಕ್ಷದ್ವೀಪದ ಸಮೂಹ ಪ್ರದೇಶ ಹಾಗೂ ಪಕ್ಕದ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ.
ಸಮಯಪ್ರಜ್ಞೆಯಿಂದ ರೈಲು ದುರಂತ ತಪ್ಪಿಸಿದ ಸಿಬ್ಬಂದಿಗೆ ಸನ್ಮಾನ
ಅದೇ ರೀತಿ ರಾಜ್ಯದ ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ರಾಮನಗರ ಮತ್ತು ಬೆಂಗಳೂರಿನ ಗ್ರಾಮಾಂತರ ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆಯನ್ನು ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿಯೂ ಸಹ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರೀ ಗುಡುಗು ಸಹಿತ ಮಳೆಯಾಗಲಿದೆ ಎನ್ನಲಾಗಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್