ಅಲಗೇರಿ ಭೂ-ಸ್ವಾಧೀನ ಪ್ರಕ್ರಿಯೆ:ಬೇಲೇಕೇರಿ ಬಂದರು: ಕೋವಿಡ್: ಭೃಷ್ಟಾಚಾರದ ವಿಷಯ ಪ್ರಸ್ತಾಪ
ಕುಮಟಾ ಉಪವಿಭಾಗಾಧಿಕಾರಿ ಎಂ.ಅಜೀತ ರೈ, ತಹಶೀಲ್ದಾರ್ ಉದಯಕುಂಬಾರ ಹಾಜರಾತಿ
ಅಂಕೋಲಾ : ಉತ್ತರಕನ್ನಡ ಜಿಲ್ಲಾಧಿಕಾರಿ ಡಾ||ಹರೀಶಕುಮಾರ ಬುಧವಾರ, ಇಲ್ಲಿಯ ತಹಶೀಲ್ದಾರ್ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಕರೆದು ಅಲಗೇರಿ ವಿಮಾನ ನಿಲ್ದಾಣ ಯೋಜನೆಗೆ ಸಂಬAಧಿಸಿದ ಭೂ-ಸ್ವಾಧೀನ ಪ್ರಕ್ರಿಯೆ, ಪ್ರಸ್ತಾವಿತ ಬೇಲೇಕೇರಿ ಬಂದರು ಅಭಿವೃದ್ಧಿ ವಿಚಾರ, ಸರಕಾರಿ ಕಚೇರಿಗಳಲ್ಲಿ ಭೃಷ್ಟಾಚಾರಕ್ಕೆ ಅವಕಾಶ ನೀಡದಿರುವುದು, ಕೋವಿಡ್ ಸಂಬoಧಿತ ಹತ್ತಾರು ವಿಷಯಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕುಮಟಾ ಉಪವಿಭಾಗಾಧಿಕಾರಿ ಎಂ.ಅಜೀತ ರೈ, ತಹಶೀಲ್ದಾರ್ ಉದಯ ಕುಂಬಾರ, ಜಿಲ್ಲಾ ಆರೋಗ್ಯಾಧಿಕಾರಿ ಡಾ||ಶರದ್ ನಾಯಕ ಹಾಜರಿದ್ದರು.
ಅಲಗೇರಿ ವಿಮಾನ ನಿಲ್ದಾಣ ಯೋಜನೆ : ಗೆ ಸಂಬoಧಿಸಿದoತೆ ಭೂ-ಸ್ವಾಧೀನ ಪಡಿಸಿಕೊಳ್ಳಲು ಪ್ರಾಥಮಿಕ ಹಂತದ ಅಧಿಸೂಚನೆ ಹೊರಡಿಸಲಾಗಿದ್ದು, ಸರ್ವೇ ಕಾರ್ಯ ಸಹ ಆರಂಭವಾಗಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಆಡಳಿತ ವ್ಯವಸ್ಥೆ ಜೊತೆ ಆರಂಭಿಕ ಹಂತದಲ್ಲಿಯೇ ಸಹಕರಿಸುತ್ತಿರುವ ಬೇಲೇಕೇರಿ, ಭಾವಿಕೇರಿ ಮತ್ತು ಅಲಗೇರಿ ಗ್ರಾ.ಪಂ.ವ್ಯಾಪ್ತಿಯ ನಾಗರಿಕರಿಗೆ ಜಿಲ್ಲಾಡಳಿತದ ಪರವಾಗಿ ಅಭಿನಂದನೆ ಸಲ್ಲಿಸಿ ಮಾತನಾಡಿ, 2013ರ ಹೊಸ ಕಾನೂನಿನಂತೆ ಭೂಸಂತ್ರಸ್ತರಾಗಲಿರುವವರಿಗೆ ಪಾರದರ್ಶಕವಾಗಿ ಪರಿಹಾರ ಮತ್ತು ಪುನರ್‌ವಸತಿ ಕಲ್ಪಿಸಲಾಗುತ್ತದೆ. ಕಾನೂನು ಪರಿಮಿತಿಯಲ್ಲಿ ನ್ಯಾಯಯುತವಾಗಿ ಸ್ಥಳೀಯರ ಬೇಡಿಕೆ ಈಡೇರಿಸಲು ಮಾನವೀಯ ನೆಲೆಯಲ್ಲಿಯೂ ಪ್ರಯತ್ನಿಸಲಾಗುವುದು. ಜಿಲ್ಲಾ ಉಸ್ತುವಾರಿ ಮಂತ್ರಿಗಳು ಸಹ ಸ್ಥಳೀಯರ ನೆರವಿಗೆ ವಿಶೇಷ ಚಿಂತನೆ ಹೊಂದಿದ್ದು ಮುಂದಿನ ದಿನಗಳಲ್ಲಿ ಗ್ರಾಮ ಸಭೆ ಹಮ್ಮಿಕೊಂಡು ಸೂಕ್ತ ಪರಿಹಾರ ಮತ್ತು ಪುನರ್‌ವಸತಿ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.
ಬೇಲೇಕೇರಿ ಬಂದರು ನಿರ್ಮಾಣ : ಅಂತರಾಷ್ಟಿçÃಯ ಮಟ್ಟದ ದೊಡ್ಡ ಬಂದರು ಅಭಿವೃದ್ಧಿಗಾಗಿ ವಿಸ್ತçತ ಯೋಜನೆ ರೂಪಿಸಲಾಗುತ್ತಿದ್ದು, ಇರುವ ಕೆಲ ಕಾನೂನಾತ್ಮಕ ತೊಡಕುಗಳು ಶೀಘ್ರವೇ ಬಗೆಹರಿಯುವ ವಿಶ್ವಾಸ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ನಮ್ಮ ಜಿಲ್ಲೆಯಲ್ಲಿ ವಿಶಾಲ ಕಡಲ ತೀರ ಹೊಂದಿದ್ದರು. ಈವರೆಗೂ ಹೆಚ್ಚಿನ ಅಭಿವೃದ್ಧಿ ಸಾಧ್ಯವಾಗಿಲ್ಲ. ಬಂದರು ಯೋಜನೆ ಮೂಲಕ ಸರ್ಕಾರ ನಾನಾ ರೀತಿಯ ಅಭಿವೃದ್ಧಿಗೆ ಮುಂದಾಗಲಿದೆ ಎಂದು ತಿಳಿಸಿದರು.
ಕೋವಿಡ್: ದಿನಗಳೆದಂತೆ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಅಂಕಿ ಅಂಶಗಳನ್ನು ವಿಶ್ಲೇಷಿಸಿದಾಗ ಗಂಡಸರಲ್ಲಿಯೇ ಹೆಚ್ಚಿನ ಸೋಂಕು ಕಂಡು ಬಂದಿದ್ದು ಅನಗತ್ಯವಾಗಿ ಯಾರು ಹೊರಗಡೆ ಸುತ್ತಾಡದಂತೆ ಕಿವಿ ಮಾತು ಹೇಳಿದ ಜಿಲ್ಲಾಧಿಕಾರಿಗಳು, ಮಾಸ್ಕ್ನ್ನು ಕಡ್ಡಾಯವಾಗಿ ಧರಿಸುವುದು ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಕರೆ ನೀಡಿದರು. ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ನೀಡಿದ್ದಲ್ಲದೆ, ಸರಕಾರಿ ಕಚೇರಿಗಳಲ್ಲಿ ಮಾಸ್ಕ್ ಇಲ್ಲದವರಿಗೆ ಇನ್ನು ಮುಂದೆ ಪ್ರವೇಶ ನಿರಾಕರಿಸಲಾಗುವುದು ಎಂದರು. ಮಾತು ಮುಂದುವರೆಸಿದ ಜಿಲ್ಲಾಧಿಕಾರಿಗಳು ತಾಲೂಕಿನಲ್ಲಿಯೇ ಸೋಂಕಿತರ ಚಿಕಿತ್ಸೆಗೆ ವಿಶೇಷ ವ್ಯವಸ್ಥೆ ಮಾಡಿ ಅದಕ್ಕೆ ಪೂರಕವಾಗಿ 50 ಹಾಸಿಗೆಗಳಿಗೂ ಆಕ್ಸಿಜನ್ ಸೌಲಭ್ಯ ಒದಗಿಸಲಾಗುವುದು. ಕ್ಲಿಷ್ಟಕರ ಪ್ರಕರಣಗಳನ್ನು ಮಾತ್ರ ಜಿಲ್ಲಾಸ್ಪತ್ರೆಗೆ ರವಾನಿಸಲಾಗುವುದು ಎಂದು ಹೇಳಿ ಜನರು ಆತಂಕಿತರಾಗದೆ ಕೋವಿಡ್ ಮುಂಜಾಗ್ರತೆ ಮತ್ತು ಮಾರ್ಗಸೂಚಿ ಪಾಲನೆ ಮೂಲಕ ತಮ್ಮ ಆರೋಗ್ಯ ರಕ್ಷಣೆಗೆ ಕೈಜೋಡಿಸುವಂತೆ ತಿಳಿಸಿದರು.
ಭೃಷ್ಟಾಚಾರ ತಡೆ:ಯಾವುದೇ ಇಲಾಖೆಯಲ್ಲಿ ಭೃಷ್ಟಾಚಾರ ಕಂಡುಬoದರೆ ಜಿಲ್ಲೆಯ ಜವಬ್ದಾರಿಯುತ ಅಧಿಕಾರಿಯಾಗಿ ನಾನು ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ಯಾವುದೇ ಇಲಾಖೆಯವರಿರಲಿ ಲಂಚ ಸ್ವೀಕರಿಸುವುದು ಅಪರಾಧವಾಗಿದೆ ಅಂತೆಯೇ ಲಂಚ ಕೊಟ್ಟು ಕೆಲಸ ಮಾಡಿಸಿಕೊಳ್ಳಲು ಪ್ರಯತ್ನಿಸುವುದು ಸಹ ಅಪರಾಧ. ಯಾರೇ ಆಗಲಿ ಯಾವುದೇ ಕಾರಣಕ್ಕೂ ಭೃಷ್ಟಾಚಾರಕ್ಕೆ ಅವಕಾಶ ಮಾಡಿಕೊಡಬಾರದು. ಒಂದೊಮ್ಮೆ ಭೃಷ್ಟಾಚಾರದಲ್ಲಿ ಭಾಗಿಯಾಗಿರುವದು ಕಂಡು ಬಂದಲ್ಲಿ ಕಠಿಣ ಕಾನೂನು ಶಿಕ್ಷಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಈ ವೇಳೆ ಜಿಲ್ಲಾಧಿಕಾರಿಗಳು ಯಾರ ಹೆಸರನ್ನು ಉಲ್ಲೇಖಿಸಿಲ್ಲವಾದರೂ, ಅಪರೋಕ್ಷವಾಗಿ ನಿನ್ನೆಯಷ್ಟೇ ಲಂಚದ ಬೇಡಿಕೆಯಿಟ್ಟು ಎ.ಸಿ.ಬಿ ಬಲೆಗೆ ಬಿದ್ದಿರುವ ಜೊಯಿಡಾ ತಹಶೀಲ್ದಾರ ಕಾರ್ಯಾಲಯದ ಸಿಬ್ಬಂದಿಯೋರ್ವನಿoದಾಗಿಯೇ ಇಂದಿನ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಭೃಷ್ಟಾಚಾರದ ವಿಷಯವನ್ನು ಪ್ರಸ್ತಾಪಿಸಿರಬಹುದು ಎನ್ನಲಾಗಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
ಚಿಂತಿಸುವ ಅವಶ್ಯಕತೆ ಇಲ್ಲ, ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ
ಶ್ರೀ ಕೇರಳ, ಕರಾವಳಿ ಮತ್ತು ತುಳುನಾಡಿನ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು.
ಸರ್ವ ಸಮಸ್ಯೆಗಳಿಗೂ ಪರಿಹಾರ ಇವರಲ್ಲಿ ಮಾತ್ರ ಸಾಧ್ಯ. ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಡೈವೋರ್ಸ್, ಕೋರ್ಟ್ ಕೇಸ್, ವಿದ್ಯೆ, ಉದ್ಯೋಗ, ಮದುವೆ ವಿಳಂಬ, ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ – ನಷ್ಟ, ರಾಜಕೀಯ, ವಿದೇಶ ಪ್ರಯಾಣ, ಸಾಲಬಾಧೆ, ಶತ್ರು ಪೀಡೆ, ಎಷ್ಟೇ ಸಂಪತ್ತಿದ್ದರೂ ಮನಶಾಂತಿಯ ಕೊರತೆ, ಎಷ್ಟೇ ಪ್ರಯತ್ನ ಪಟ್ಟರೂ ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆ ಆಗದೇ ನೊಂದಿದ್ದರೆ, ಇನ್ನು ನಿಮ್ಮ ಜೀವನದ ಯಾವುದೇ ಗುಪ್ತ ಹಾಗೂ ಕಠಿಣ ಸಮಸ್ಯೆಗಳೇನೆ ಇದ್ದರೂ ಅದರ ಮೂಲವನ್ನು ಶೋಧಿಸಿ ಶೀಘ್ರ ಹಾಗೂ ಶಾಶ್ಟತ ಪರಿಹಾರ ಮಾಡಿಕೊಡುತ್ತಾರೆ. ಪಂಡಿತ ಶ್ರೀ ಶ್ರೀ ಬ್ರಹ್ಮ ಕುಮಾರ ಗುರೂಜಿ:-8884997762
( ಜಾಹೀರಾತು )