Important
Trending

ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ: ಇಬ್ಬರ ಬಂಧನ

ಶಿರಸಿ: ತಾಲೂಕಿನ ಕಳವೆ ಗ್ರಾಮದ ಹಂದಿಜಡ್ಡಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ತಾಲೂಕಿನ ಕಳವೆಯ ಹಂದಿಜಡ್ಡಿಯ ಸುರೇಶ ನಾರಾಯಣ ಗೌಡ ಹಾಗೂ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಿಕ್ಕಮಾಳಕೊಪ್ಪದ ಎ.ಜೆ. ಮಂಜಪ್ಪ ಬಂಧಿತ ವ್ಯಕ್ತಿಗಳಾಗಿದ್ದಾರೆ.

ಇವರಿಬ್ಬರು ತಾಲೂಕಿನ ಕಳವೆ ಗ್ರಾಮದ ಹಂದಿಜಡ್ಡಿ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ಶ್ರೀಗಂಧದ ಗಿಡಗಳನ್ನು ಕಡಿದು ಸಾಗಾಟ ಮಾಡಲು ಯತ್ನಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಇಬ್ಬರನ್ನು ಬಂಧಿಸಿ 26.500 ಕೆ.ಜಿ ಶ್ರೀಗಂಧವನ್ನು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈ ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಅಜ್ಜಯ್ಯ.ಜಿ.ಆರ್. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಿಂಗಾಣಿ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಎಂ.ಆರ್.ನಾಯ್ಕ, ಗಿರೀಶ ನಾಯ್ಕ, ಅಶೋಕ ಪೂಚಾರ, ಗಸ್ತು ಅರಣ್ಯ ಪಾಲಕರಾದ ಹನುಮಂತ ಕೆ.ಎಂ, ಪುಂಡಲೀಕ ತಾವರಕೇಡ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ವಿಸ್ಮಯ ನ್ಯೂಸ್, ಶಿರಸಿ

Back to top button