ಕೆರೆಮನೆ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ 90ನೇ ವರ್ಷದ ಸಂಭ್ರಮ: ರಾಷ್ಟ್ರೀಯ ನಾಟ್ಯೋತ್ಸವ ಉದ್ಘಾಟನೆ

ಹೊನ್ನಾವರ: ಕೆರೆಮನೆ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ 90ನೇ ವರ್ಷದ ಸಂಭ್ರಮ ಹಾಗೂ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ ಉದ್ಘಾಟನಾ ಕಾರ್ಯಕ್ರಮವು ಹೊನ್ನಾವರ ತಾಲೂಕಿನ ಗುಣವಂತೆಯಲ್ಲಿ ನಡೆಯಿತು. ದೀಪ ಪ್ರಜ್ವಲನೆಯ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಸಚಿವರಾದ ಮಂಕಾಳ ವೈದ್ಯ ಮಾತನಾಡಿ , ಯಕ್ಷಗಾನ ಕಲೆಗೆ ಉತ್ತರ ಕನ್ನಡ ಜಿಲ್ಲೆಯ ಕೊಡುಗೆ ದೊಡ್ಡದು. ಯಕ್ಷಗಾನ ಕಲೆಯು ಜಿಲ್ಲೆಯ ಜನಜೀವನದ ಮೇಲೆ ಉತ್ತಮ ಪರಿಣಾಮ ಬೀರಿದೆ. ನಮ್ಮ ಜಿಲ್ಲೆಯಲ್ಲಿ ಈ ಕಲೆಯನ್ನು ಮುಂದುವರಿಸಿಕೊoಡು ಹೋಗುವ ಕಾರ್ಯ ನಡೆಯುತ್ತಿದೆ. ಕಲಾಸಕ್ತರಿಗೆ ಪ್ರೇರಣೆ ನೀಡುವುದಕ್ಕೆ ಈ ಕಾರ್ಯಕ್ರಮವು ಒಂದು ವೇದಿಕೆಯಾಗಿದೆ. ಇಂತಹ ಕಾರ್ಯಕ್ರಮಕ್ಕೆ ಪೂರಕವಾಗಿ ಸರ್ಕಾರದಿಂದ ಸಹಕಾರ ಒದಗಿಸುವುದಕ್ಕೆ ಪ್ರಯತ್ನ ಮಾಡುತ್ತೇನೆ’ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ನಮ್ಮ ಜಿಲ್ಲೆಯು ವೈವಿಧ್ಯಮಯ ಪರಿಸರದಲ್ಲಿಯೂ ಸುಸಂಸ್ಕ್ರತವಾದ ಜನರ ಜೀವನವನ್ನು ಹೊಂದಿರುವುದಕ್ಕೆ ಇಲ್ಲಿಯ ಜಾನಪದ ಕಲೆಯು ಕಾರಣವಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಈ ಸಂದರ್ಭದಲ್ಲಿ ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿಯನ್ನು ಕರ್ನಾಟಕ ಜಾನಪದ ಪರಿಷತ್ತಿಗೆ ಪ್ರದಾನ ಮಾಡಲಾಯಿತು. ಪರಿಷತ್ತಿನ ಅಧ್ಯಕ್ಷ ಪ್ರೊ. ಹಿ.ಚಿ.ಬೋರಲಿಂಗಯ್ಯ ಮತ್ತು ಮೆನೆಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ಪ್ರಶಸ್ತಿ ಸ್ವೀಕರಿಸಿದರು.
ವೇದಿಕೆಯಲ್ಲಿ ಡಾ. ನಿರಂಜನ ವಾನಳ್ಳಿ, ಶಿವಾನಂದ ಹೆಗಡೆ, ಕೇರಳದ ಫೋಕ್ ಲ್ಯಾಂಡ್ ಅಧ್ಯಕ್ಷ ಡಾ. ಜಯರಾಜನ್ ಹಾಜರಿದ್ದರು. ಸಮಿತಿಯ ಕಾರ್ಯಾಧ್ಯಕ್ಷ ಲಕ್ಷ್ಮೀನಾರಾಯಣ ಕಾಶಿ ಸ್ವಾಗತಿಸಿದರು. ಪತ್ರಕರ್ತ ಜಿ.ಯು.ಭಟ್ ಆಶಯ ಮಾತನಾಡಿದರು. ಮಂಡಳಿಯ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ವಂದಿಸಿದರು. ಎಲ್.ಎಂ.ಹೆಗಡೆ ಮತ್ತು ಈಶ್ವರ ಭಟ್ಟ ನಿರ್ವಹಿಸಿದರು.
ವಿಸ್ಮಯ ನ್ಯೂಸ್ ವಿವೇಕ್ ಶೇಟ್ ಹೊನ್ನಾವರ