
ಭಟ್ಕಳ: ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಸರ್ಕಾರದ ಯುವನಿಧಿ ಕಾರ್ಯಕ್ರಮದ ಕುರಿತಾಗಿ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ತಾಲೂಕಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ರಾಜು ನಾಯ್ಕ ಮಾತನಾಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡಜನರ ಹಿತ ಕಾಪಾಡಲು ಇದ್ದು ಅದರಲ್ಲಿಯೂ ಯುವನಿಧಿ ಯೋಜನೆ ವಿದ್ಯಾಭ್ಯಾಸದ ನಂತರ ಉದ್ಯೋಗ ಪಡೆಯಲು ಬೇಕಾದ ಕೌಶಲ್ಯವನ್ನು ಪಡೆದುಕೊಳ್ಳಲು ಸಹಾಯ ಮಾಡುತ್ತದೆ ಎಂದರು.
ಕಾರವಾರ ಎಂಪ್ಲಾಯ್ಮೆಂಟ್ ಆಫೀಸ್ ಅಧಿಕಾರಿಯಾದ ಶಿವರಾಜ್ ಗೌಡ ಮಾತನಾಡಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಲು ಪುಸ್ತಕಗಳ ಜೊತೆಗೆ ಪತ್ರಿಕೆಗಳನ್ನು ಓದಬೇಕು ಎಂದರು. ಹಾಗೂ ಯುವನಿಧಿ ಯೋಜನೆಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಲೇಜಿನ ಪ್ರಾಂಶುಪಾಲರಾದ ನಾಗೇಶ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ಯುವನಿಧಿ ಯೋಜನೆಯ ಸದುಪಯೋಗ ಪಡೆದುಕೊಂಡು ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯುವ ನಿಧಿ ಯೋಜನೆಯ ಬಿತ್ತಿ ಪತ್ರವನ್ನು ವಿತರಿಸಲಾಯಿತು
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿಯಾದ ಅಣ್ಣಪ್ಪ ನಾಯ್ಕ , ಎನ್ಎಸ್ಎಸ್ ಯೋಜನಾಧಿಕಾರಿಯದ ವೈಶಾಲಿ ಜಿ ಆರ್ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶಿಲ್ಪಾ ನಾಯಕ್ ನಿರೂಪಿಸಿದರು, ರೂಪ ನಾಯ್ಕ ಪ್ರಾರ್ಥಿಸಿದರು.
ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ