Important
Trending

ಹೆಚ್ಚುತ್ತಿರುವ ಅಕ್ರಮ ಗೋಸಾಗಾಟ: ಹಿಂದೂ ಜಾಗರಣಾ ವೇದಿಕೆ ವತಿಯಿಂದ ಮಾರ್ಚ್ 17ರಂದು ಮನವಿ

ಭಟ್ಕಳ: ಇತ್ತಿಚೆಗೆ ಭಟ್ಕಳ ತಾಲೂಕಿನಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಗೋಹತ್ಯೆಯಂತಹ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತಿದ್ದು. ಈ ನಿಟ್ಟಿನಲ್ಲಿ ಅಕ್ರಮ ಗೋ ಸಾಗಾಟ ಖಂಡಿಸಿ ಭಟ್ಕಳ ತಾಲೂಕಾ ಹಿಂದೂ ಜಾಗರಣಾ ವೇದಿಕೆ ವತಿಯ ನೇತೃತ್ವದಲ್ಲಿ ಮಾರ್ಚ್ 17 ರಂದು ಸಹಾಯಕ ಆಯುಕ್ತರಿಗೆ ಮನವಿ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಭಟ್ಕಳ ಮಂಡಳವು ಇದಕ್ಕೆ ಬೆಂಬಲವನ್ನು ವ್ಯಕ್ತಪಡಿಸಿ ಪತ್ರಿಕಾ ಪ್ರಕಟಣೆ ನೀಡಿದೆ.

ಭಟ್ಕಳದಲ್ಲಿ ಅಕ್ರಮ ಗೋಸಾಗಾಟ ಹೆಚ್ಚುತ್ತಿರುವುದು ಆತಂಕಕಾರಿ ವಿಚಾರವಾಗಿದೆ. ದಿನಂಪ್ರತಿ ಅಕ್ರಮ ಜಾನುವಾರುಗಳ ಸಾಗಾಟ ಪತ್ತೆಯಾಗುತ್ತಿದ್ದು,ಈ ಬಗ್ಗೆ ಸೂಕ್ತ ಕ್ರಮ ಆಗಬೇಕು. ಶಿರಾಲಿ ಸೇರಿದಂತೆ ತಾಲ್ಲೂಕಿನ ಚೆಕ್ ಪೋಸ್ಟಗಳನ್ನು ಮತ್ತಷ್ಟು ಬಿಗುಗೊಳಿಸಬೇಕು. ರಾತ್ರಿ ವೇಳೆ ಇಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಜಾನುವಾರುಗಳನ್ನು ಅಕ್ರಮವಾಗಿ ಮತ್ತು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದು, ಇದು ತೀರಾ ಖಂಡನೀಯ.

ಅಕ್ರಮವಾಗಿ ಯಾವುದೇ ವ್ಯಕ್ತಿಗಳು ಜಾನುವಾರು ಸಾಗಾಟ ಮಾಡಿದರೂ ಅಂಥವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆ ಮುಂದಾಗಬೇಕು. ಗೋವುಗಳನ್ನು ಹಿಂದೂಗಳು ಪೂಜಿಸುತ್ತಿದ್ದು, ಗೋವುಗಳ ಹತ್ಯೆ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ತರುವುದು ಸರಿಯಲ್ಲ. ಭಟ್ಕಳದಲ್ಲಿ ಪದೇ ಪದೇ ಅಕ್ರಮ ಜಾನುವಾರು ಸಾಗಾಟ ನಡೆಯುತ್ತಿದ್ದು ಇದನ್ನು ತಡೆಯುವ ಕೆಲಸ ಆಗಬೇಕು. ಅಕ್ರಮ ಜಾನುವಾರು ಸಾಗಾಟದ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸುತ್ತೇವೆ. ಜಾನುವಾರುಗಳನ್ನು ತುಂಬಿಕೊಂಡು ಹೊರಗಿನಿಂದ ಬರುವ ವಾಹನಗಳು ಮತ್ತು ಅದನ್ನು ತರುವ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತಾಗಬೇಕು. ಇದಕ್ಕೆ ನಮ್ಮ ಪಕ್ಷದಿಂದ ಸಂಪೂರ್ಣ ಬೆಂಬಲವಿದ್ದು, ಅಂದು ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಕ್ರಮ ಗೋವು ಸಾಗಾಟವನ್ನು ಬಲವಾಗಿ ಖಂಡಿಸಬೇಕು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.

ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ

Back to top button