
ಹೊನ್ನಾವರ: ತಾಲೂಕಿನ ಉಪ್ಪೋಣಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಸ್ಕಾರ್ಪಿಯೋ ನಡುವೆ ಭೀಕರ ಅಪಘಾತ ಸಂಭವಿಸಿದೆ. ಭಟ್ಕಳದಿಂದ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಬಸ್ ಹಾಗೂ ಸಾಗರ ಕಡೆಯಿಂದ ಹೊನ್ನಾವರ ಬರುತ್ತಿದ್ದ ಸ್ಕಾರ್ಪಿಯೋ ವಾಹನ ನಡುವೆ ಅಪಘಾತ ನಡೆದಿದ್ದು, ಅಪಘಾತದ ರಭಸಕ್ಕೆ ಸ್ಕಾರ್ಪಿಯೋ ಸಂಪೂರ್ಣ ಜಖಂಗೊoಡಿದೆ.
ಅಪಘಾತಕ್ಕೆ ಇಬ್ಬರು ಮೃತಪಟ್ಟ ಬಗ್ಗೆ ಮಾಹಿತಿಯಿದ್ದು, ಮೂವರು ಗಂಭೀರ ಸ್ಥಿತಿಯಲ್ಲಿ ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಅಪಘಾತದಿಂದ ಹೆದ್ದಾರಿ ಸಂಚಾರ ತಾತ್ಕಾಲಿಕವಾಗಿ ಸ್ಥಗಿತವಾಗಿತ್ತು. ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ