Join Our

WhatsApp Group
Important
Trending

ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ

ಕಾರವಾರ: ರಾಜ್ಯದ ಕರಾವಳಿ ಭಾಗದಲ್ಲಿ ಇಂದಿನಿoದ 21 ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ದಿನಗಳಲ್ಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಗಿನ ಸೂಚನೆಗಳನ್ನು ಪಾಲಿಸುವಂತೆ ತಿಳಿಸಿದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಪ್ರವಾಸಿಗರು, ಸಾರ್ವಜನಿಕರು ಹಾಗೂ ಮೀನುಗಾರರು ನದಿ, ಸಮುದ್ರಕ್ಕೆ ಇಳಿಯಬಾರದು. ಕೃಷಿಕರು ಮಳೆ, ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರಬೇಕು. ಅಲ್ಲದೇ ಮಳೆ ಬರುವ ಸಂದರ್ಭದಲ್ಲಿ ಅಪಾಯಕಾರಿ ಮರ, ಕಟ್ಟಡ, ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿoದ ಕಡ್ಡಾಯವಾಗಿ ದೂರವಿರಬೇಕು. ಸಾರ್ವಜನಿಕರಿಗೆ ಅಗತ್ಯವಿದ್ದಲ್ಲಿ ಮುಂಜಾ ಗ್ರತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು. ಸಾರ್ವಜನಿಕರು ತಗ್ಗು ಪ್ರದೆ ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯ ಸೂಚನೆಯನ್ನು ಹೊರಡಿಸಿದೆ.

ಮಳೆಗಾಲದ ಕಠಿಣ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ ವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಜಿಲ್ಲೆಯ ಹವಾಮಾನ ಪರಿಸ್ಥಿತಿ ಕುರಿತಂತೆ 24 ಗಂಟೆಗಳ ವರದಿಗಳನ್ನು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣ ಹಾಗೂ ಸ್ಥಳೀಯ ಸುದ್ದಿ ಪತ್ರಿಕೆಗಳನ್ನು ಪರಿಶೀಲಿಸ ಬಹುದಾಗಿದೆ. ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶಿಥಿಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌoಡ್ ಅಥವಾ ಮನೆಯ ಗೋಡೆ, ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.

ಅಗತ್ಯವಿದ್ದಲ್ಲಿ ಈಗಾಗಲೇ ಸಂಬoಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆದುಕೊಳ್ಳುವುದು. ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕಾಲುಸಂಕ, ಕಿರು ಸೇತುವೆ ಇತ್ಯಾದಿಗಳನ್ನು ದಾಟುವ ಮುನ್ನ ಎಚ್ಚರಿಕೆ ವಹಿಸುವುದು. ಸಾರ್ವಜನಿಕರಿಗೆ ಈ ಮೇಲಿನ ಅಂಶಗಳoತೆ ಶಿಥಿಲಾವಸ್ಥೆಯಿರುವ ಅಥವಾ ಕುಸಿತದ ಹಂತದ ಕಂಪೌoಡ್ ಅಥವಾ ಮನೆಯ ಗೋಡೆ ಕಂಡುಬAದಲ್ಲಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆಗೆ ಮಾಹಿತಿ ನೀಡಬಹುದಾಗಿದೆ.

ಬ್ಯುರೋ ರಿಪೋರ್ಟ ವಿಸ್ಮಯ ನ್ಯೂಸ್

Back to top button