
ಭಟ್ಕಳ: ತಾಲೂಕಿನ ಶಿರಾಲಿಯ ಸಿದ್ದಾರ್ಥ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸುವ 2025 ಸಾಲಿನ JEE ಮೇನ್ಸ್ ಪರೀಕ್ಷೆಯಲ್ಲಿ 98.18 ಪ್ರತಿಶತ ಅಂಕ ಗಳಿಸಿದ್ದ ವಿದ್ಯಾರ್ಥಿ ಸಂದೇಶ ಡಿ ಶೇಟ್ ಐಐಐಟಿ ಪುಣೆಯಲ್ಲಿ ಸಿ.ಎಸ್ ವಿಭಾಗದಲ್ಲಿ ಸ್ಥಾನ ಪಡೆದುಕೊಂಡು ಸಾಧನೆ ಮಾಡಿದ್ದಾನೆ.
ತಮ್ಮ ಕಾಲೇಜಿನಲ್ಲಿ ವ್ಯಾಸಾಂಗ ಮಾಡಿದ ವಿದ್ಯಾರ್ಥಿಯೊಬ್ಬ ಪ್ರತಿಷ್ಠಿತ ಕಾಲೇಜಿನಲ್ಲಿ ಸ್ಥಾನ ಪಡೆದುಕೊಂಡಿರುವುದಕ್ಕೆ ಕಾಲೇಜಿನ ಶಿಕ್ಷಕ ವೃಂದ, ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಯ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.
ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ