
ಭಟ್ಕಳ: ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್ 13 ರಂದು ಲೋಕ್ ಅದಾಲತ್ ಕಾರ್ಯಕ್ರಮ ಆಯೋಜನೆಗೊಂಡಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಹಾಗೂ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಹೇಳಿದರು.
ಇಡಗುಂಜಿ ಮಹಾಗಣಪತಿ ದೇವಸ್ಥಾನಕ್ಕೆ ಹರಿದುಬಂದ ಜನಸಾಗರ: 30 ಕ್ವಿಂಟಾಲ್ ನಷ್ಟು ಪಂಚಕಜ್ಜಾಯ ನೈವೇದ್ಯ
ಭಟ್ಕಳ ತಾಲೂಕಿನ ನ್ಯಾಯಾಲಯ ಸಂಕೀರ್ಣದಲ್ಲಿ ನಡೆಸಲಾದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಹಿರಿಯ ಸಿವಿಲ್ ನ್ಯಾಯಾಲಯ, ಪ್ರಧಾನ ಸಿವಿಲ್ ನ್ಯಾಯಾಲಯ ಹಾಗೂ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಸೇರಿದಂತೆ ಮೂರು ನ್ಯಾಯಾಲಯಗಳಲ್ಲಿ ಒಟ್ಟು 1508 ಪ್ರಕರಣಗಳನ್ನು ರಾಜಿಯಾಗಬಹುದಾದ ಪ್ರಕರಣವೆಂದು ಗುರುತಿಸಲಾಗಿದೆ ಎಂದರು.
ಲೋಕ್ ಅದಾಲತ್‌ನ ಲಭ್ಯವಾಗುವ ಲಾಭಗಳು
ಈ ವಿಷಯದಲ್ಲಿ ಈಗಾಗಲೇ ವಕೀಲರ ಸಂಘದ ಸಹಕಾರ ಕೋರಲಾಗಿದ್ದು ವಕೀಲರ ಸಂಘದಿoದ ಸಾಕಷ್ಟು ಸಹಕಾರ ದೊರೆತಿದೆ. ಲೋಕ್ ಅದಾಲತ್ ನಲ್ಲಿ ಐ.ಪಿ.ಸಿ ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ, ಮೋಟಾರು ವಾಹನ ಕಾಯಿದೆ ಉಲ್ಲಂಘನೆ, ವಿಚ್ಛೆದನ ಪ್ರಕರಣಗಳು, ಅಪಘಾತ ಪ್ರಕರಣ ಸೇರಿದಂತೆ ಇನ್ನೂ ಅನೇಕ ಪ್ರಕರಣಗಳಲ್ಲಿ ಪಕ್ಷಗಾರರು ಲೋಕ್ ಅದಾಲತ್ ನಲ್ಲಿ ಹಾಜರಾಗಿ ರಾಜಿಯಾಗಬಹುದಾಗಿದೆ.
ಲೋಕ್ ಅದಾಲತ್‌ನಲ್ಲಿ ರಾಜಿಯಾದ ಪ್ರಕರಣದಲ್ಲಿ ಮೇಲ್ಮನವಿಗೆ ಅವಕಾಶವಿರುವುದಿಲ್ಲ, ಲೋಕ್ ಅದಾಲತ್‌ನಲ್ಲಿ ಪಕ್ಷಗಾರರ ಹಣ ಉಳಿತಾಯವಾಗುವುದಲ್ಲದೆ ಅವರ ಕುಟುಂಬದಲ್ಲಿ ಹಾಗೂ ಸಮಾಜದಲ್ಲಿ ಶಾಂತಿ ಸ್ಥಾಪನೆಗೆ ಅವಕಾಶವಾಗುತ್ತದೆ, ಸಮಯವು ಉಳಿತಾಯವಾಗುತ್ತದೆ. ಇಲ್ಲಿ ಸೋಲು ಗೆಲುವು ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.
ಅಭಿಯಾನದ ಲಾಭ ಪಡೆದುಕೊಳ್ಳುವಂತೆ ಮನವಿ
1 ಜುಲೈ 2025 ರಿಂದ ಪ್ರಾರಂಭಿಸಿ 7 ಅಕ್ಟೋಬರ್ 2025 ರವರೆಗೆ ರಾಷ್ಟ್ರೀಯ ಮಧ್ಯಸ್ಥಿಕೆ ಅಭಿಯಾನ ಕಾರ್ಯಕ್ರಮ ನಡೆಯುತ್ತಿದ್ದು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಗಳಲ್ಲಿ ಪಕ್ಷಗಾರರು ಈ ಅಭಿಯಾನದ ಲಾಭ ಪಡೆದುಕೊಳ್ಳಬಹುದಾಗಿದೆ. ರಾಷ್ಟ್ರೀಯ ಮಧ್ಯಸ್ಥಿಕೆ ಅಭಿಯಾನದಡಿಯಲ್ಲಿ ಒಂದು ಪ್ರಕರಣದಲ್ಲಿ ಎರಡು ಕಡೆಯ ಪಕ್ಷಗಾರರು ಹಾಜರಾಗಿ ಮಧ್ಯಸ್ಥಿಕೆ ಬಯಸಿದರೆ ಮಧ್ಯಸ್ಥಿಕೆಗಾರರ ಬಳಿ ಕಳುಹಿಸಿ ಸಂದಾನಕ್ಕೆ ಪ್ರಯತ್ನಿಸಲಾಗುತ್ತದೆ.
ಎರಡು ಪಕ್ಷಗಾರರು ರಾಜಿಯಾಗಲು ಒಪ್ಪಿದರೆ ಅದನ್ನು ರಾಷ್ಟ್ರೀಯ ಮಧ್ಯಸ್ಥಿಕೆಯ ಮೂಲಕ ರಾಜಿಯಾದ ಪ್ರಕರಣ ಎಂದು ನಿರ್ಧರಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶೆ ದೀಪಾ ಅರಳುಗುಂಡಿ, ಹೆಚ್ಚುವರಿ ನ್ಯಾಯಾಧಿಶೆ ಧನವತಿ ಹಾಜರಿದ್ದರು.
ವಿಸ್ಮಯ ನ್ಯೂಸ್, ಈಶ್ವರ ನಾಯ್ಕ ಭಟ್ಕಳ