
ಶಿರಸಿ: ಹೆಸ್ಕಾಂ ಎಂ.ಟಿ. ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಿರಿಯ ಎಂಜಿನಿಯರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾಹನಕ್ಕೆ ಬಳಸುವ ಆಯಿಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಲಭ್ಯವಾಗಿದೆ. ಮೃತರಾದ ಸುರೇಶ ಅರಳೇಶ್ವರ ಶಿರಸಿಯ ಹೆಸ್ಕಾಂ ಎಂ.ಟಿ ವಿಭಾಗದಲ್ಲಿ ಕಿರಿಯ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬುಧವಾರ ರಾತ್ರಿ ವಾಹನಕ್ಕೆ ಬಳಸುವ ಆಯಿಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಯಿಲ್ ಸೇವಿಸಿ, ಅಸ್ವಸ್ಥರಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಅನಾರೋಗ್ಯದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ವಿಸ್ಮಯ ನ್ಯೂಸ್, ಶಿರಸಿ
[sliders_pack id=”1487″]