ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಕರವೇ ಆಕ್ರೋಶ: ಚಪ್ಪಲಿಹಾರ ಹಾಕಿ, ಪ್ರತಿಕೃತಿ ದಹಿಸಿ ಕಾರವಾರದಲ್ಲಿ ಪ್ರತಿಭಟನೆ
ಕಾರವಾರ: ಟ್ವೀಟ್ ಮೂಲಕ ಗಡಿವಿವಾದ ಎಬ್ಬಿಸಿ ಉದ್ಧಟತನ ಪ್ರದರ್ಶಿಸಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ದ ಕಾರವಾರದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅವರ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ದಹಿಸುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಕಾರವಾರ ನಗರದಲ್ಲಿ ಉದ್ಧವ್ ಠಾಕ್ರೆ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿದ ಕರವೇ ಕಾರ್ಯಕರ್ತರು ಬಳಿಕ ಸುಭಾಸ್ ಸರ್ಕಲ್ ಬಳಿ ಸೇರಿದ್ದರು. ಈ ವೇಳೆ ಮಹಾರಾಷ್ಟ್ರ ಸಿಎಂ ಮರಾಠಿ ಭಾಷಿಕರಿರುವ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಬಗ್ಗೆ ಟ್ವೀಟ್ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅವರ ವಿರುದ್ಧವೂ ಘೋಷಣೆ ಕೂಗಿದರು. ಬಳಿಕ ಉದ್ಧವ್ ಪ್ರತಿಕೃತಿಗೆ ಬೆಂಕಿ ಹಚ್ಚಿ ತೀವ್ರ ಆಕ್ಷೇಪ ವ್ಯಕ್ತಡಿಸಿದರು.
ಈ ವೇಳೆ ಆಕ್ರೋಶ ಹೊರ ಹಾಕಿದ ಕರವೇ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ, ಕರ್ನಾಟಕದ ಒಂದಿoಚು ಜಾಗವನ್ನು ಮಹಾರಾಷ್ಟ್ರಕ್ಕೆ ನೀಡುವುದಿಲ್ಲ. ಮಹಾರಾಷ್ಟ್ರಿಗರು ತೆವಲು ತೀರಿಸಿಕೊಳ್ಳಲು ಪದೇ ಪದೇ ಇಂತಹ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದು ಇದು ಮುಂದುವರಿದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಾರವಾರ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಮಹಾರಾಷ್ಟ್ರದ ಮುಖ್ಯಮಂತ್ರಿ ಹೇಳಿಕೆಗೆ ಅಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಕಾರವಾದ ಸುಭಾಷ್ ಸರ್ಕಲ್ ಬಳಿ ಮಹರಾಷ್ಟ್ರ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿದರು.
ವಿಸ್ಮಯ ನ್ಯೂಸ್, ಕಾರವಾರ